ತುಮಕೂರು:ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ತುಮಕೂರಿನ ಮೆಡಿಕಲ್ ಕಾಲೇಜಿನಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜು ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಮುಂದುವರೆದ ಐಟಿ ದಾಳಿ.. ಮೆಡಿಕಲ್ ಕಾಲೇಜು ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಬಂದೋಬಸ್ತ್.. - Additional Police security around Medical College
ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಐಟಿ ದಾಳಿ ನಡೆದಿರುವ ತುಮಕೂರು ಸಿದ್ದಾರ್ಥ್ ಮೆಡಿಕಲ್ ಕಾಲೇಜು ಸುತ್ತಮತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಮೆಡಿಕಲ್ ಕಾಲೇಜು ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಬಂದೋಬಸ್ತ್...
ಐಟಿ ಅಧಿಕಾರಿಗಳ ಕಿರುಕುಳದಿಂದಲೇ ರಮೇಶ್ ಸಾವನ್ನಪ್ಪಿದ್ದು ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ. ಸ್ಥಳದಲ್ಲಿ ಡಿವೈಎಸ್ಪಿ ತಿಪ್ಪೇಸ್ವಾಮಿ ಸೇರಿ ಸಬ್ ಇನ್ಸ್ಪೆಸ್ಪೆಕ್ಟರ್ಗಳು ಮೊಕ್ಕಾಂ ಹೂಡಿದ್ದಾರೆ.