ತುಮಕೂರು:ಕೋವಿಡ್-19ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈವರೆಗೆ 104 ಶಂಕಿತರ ವರದಿ ನೆಗೆಟಿವ್ ಎಂದು ಬಂದಿದೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಕೊರೊನಾ ಸೋಂಕು ತಗುಲಿರುವ 13 ವರ್ಷದ ಬಾಲಕನನ್ನು ಬೆಂಗಳೂರಿನ ಇಂದಿರಾ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ. ಎರಡು ಬಾರಿ ನಡೆಸುವ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು. ಅಲ್ಲದೆ ಬಾಲಕನ ತಾಯಿಯನ್ನು ಸಹ ಆಸ್ಪತ್ರೆಯಲ್ಲಿ ನಿಗಾ ವಹಿಸಲಾಗಿದ್ದು, ಅವರಲ್ಲಿಯೂ ನೆಗೆಟಿವ್ ಬಂದಿದೆ. ಹೀಗಾಗಿ ಅವರಿಬ್ಬರನ್ನೂ 28 ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರಿಸಲಾಗುವುದು ಎಂದಿದ್ದಾರೆ.