ತುಮಕೂರು: ತಿಪಟೂರು ನಗರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ತಾಲೂಕು ಕೇಂದ್ರಗಳಿಗೆ ತೆರಳಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದರು.
ಕೊರೊನಾ ಕುರಿತು ಜಾಗೃತಿ ಮೂಡಿಸಿದ ತುಮಕೂರು ಎಸ್ಪಿ - ತುಮಕೂರು ಎಸ್ಪಿ ಜಾಗೃತಿ
ತುಮಕೂರು ಜಿಲ್ಲೆ ತಿಪಟೂರು ನಗರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ, ಕೊರೊನಾ ಕುರಿತು ಜಾಗೃತಿ ಮೂಡಿಸಿದರು. ಸೋಂಕಿನ ಬಗ್ಗೆ ಭಯ ಬೇಡ. ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ
ಕೆಲ ಕಡೆ ಜನರು ಗುಂಪಾಗಿ ಸಂಚರಿಸುವುದು ಹಾಗೂ ಅಗತ್ಯ ವಸ್ತುಗಳಿಗಾಗಿ ಮುಗಿಬೀಳುತ್ತಿರುವುದನ್ನು ಗಮನಿಸಿದ ಜಿಲ್ಲಾ ಪೊಲೀಸ್ ಇಲಾಖೆ, ಈ ಕ್ರಮಕ್ಕೆ ಮುಂದಾಗಿದೆ.
ಕೊರೊನಾ ಸೋಂಕಿನ ಬಗ್ಗೆ ಯಾವುದೇ ಭಯ ಬೇಡ. ಅರಿವು ಬೆಳೆಸಿಕೊಳ್ಳಿ. ಸರ್ಕಾರ ವಿಧಿಸುವ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಿ ಎಂದು ಮನವಿ ಮಾಡಿದರು.