ಕರ್ನಾಟಕ

karnataka

ETV Bharat / state

ತುಮಕೂರಲ್ಲಿ ಹತ್ತೇ ದಿನಗಳಲ್ಲಿ 250ರ ಗಡಿ ದಾಟಿದ ಕೊರೊನಾ ಪ್ರಕರಣಗಳು - ತುಮಕೂರು ಲೇಟೆಸ್ಟ್ ನ್ಯೂಸ್

ಕಳೆದ ಹತ್ತು ದಿನಗಳಿಂದ ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜಿಲ್ಲೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತುಮಕೂರು ಜಿಲ್ಲಾಸ್ಪತ್ರೆ
Tumkur hospital

By

Published : Mar 20, 2021, 6:31 AM IST

ತುಮಕೂರು:ಜಿಲ್ಲೆಯಲ್ಲಿ ಕಳೆದ 10 ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದು ಜಿಲ್ಲಾಡಳಿತ ಮತ್ತು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಸರ್ಕಾರ ತುಮಕೂರನ್ನು ಕೊರೊನಾ ಹೆಚ್ಚಾಗುತ್ತಿರುವ ಜಿಲ್ಲೆ ಎಂದು ಗುರುತಿಸಿದ್ದು, ಕಳೆದ ಹತ್ತು ದಿನಗಳಲ್ಲಿ 250ಕ್ಕೂ ಅಧಿಕ ಕೊರೊನಾ ಪ್ರಕರಣ ಪತ್ತೆಯಾಗಿವೆ. 10 ದಿನಗಳ ಅಂಕಿ ಅಂಶ ನೋಡುವುದಾದರೆ,

ಮಾ.10 ರಂದು 33 ಮಂದಿ,

ಮಾ.11 - 32 ಕೇಸ್​​

ಮಾ.12 - 41ಕೇಸ್​​

ಮಾ.13 -38 ಕೇಸ್​​

ಮಾ.14 -18 ಕೇಸ್​​

ಮಾ.15 -37 ಕೇಸ್​​

ಮಾ.16 -33 ಕೇಸ್​​

ಮಾ.17 -36 ಕೇಸ್​​

ಮಾ.18 -32 ಕೇಸ್​​

ಮಾ.19 -39 ಕೇಸ್​​

ಈ ಹಿಂದಿನ ನಾಲ್ಕು ತಿಂಗಳಲ್ಲಿ ಪ್ರತಿನಿತ್ಯ ಸರಾಸರಿ 10 ಮಂದಿ ಸೋಂಕಿತರು ಪತ್ತೆಯಾಗುತ್ತಿದ್ದರು. ಆದರೆ 10 ದಿನಗಳ ಈಚೆಗೆ ಅದರ ಪ್ರಮಾಣ ಮೂರು ಪಟ್ಟು ಹೆಚ್ಚಳವಾಗುತ್ತಿದ್ದು, ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೋಂಕನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ.

ABOUT THE AUTHOR

...view details