ತುಮಕೂರು: ರಾಜ್ಯದ ವಿವಿಧ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇದೀಗ ಈ ಪಟ್ಟಿಯಲ್ಲಿ ತುಮಕೂರು ಜಿಲ್ಲೆಯೂ ಸೇರಿದೆ. ಈ ಕುರಿತು ಈಗಾಗಲೇ ಮುಖ್ಯಮಂತ್ರಿ ಕೂಡ ಜಿಲ್ಲೆಯನ್ನು ಗುರುತಿಸಿ ಹೇಳಿಕೆ ನೀಡಿದ್ದಾರೆ.
ಇಂದು ಜಿಲ್ಲೆಯಲ್ಲಿ 33 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಶಿರಾ ತಾಲೂಕಿನಲ್ಲಿ 12, ತುಮಕೂರು ತಾಲೂಕಿನಲ್ಲಿ 11, ಕುಣಿಗಲ್ ತಾಲೂಕಿನಲ್ಲಿ 3, ಕೊರಟಗೆರೆ, ಮಧುಗಿರಿ, ತಿಪಟೂರು ತಾಲೂಕಿನಲ್ಲಿ ತಲಾ ಇಬ್ಬರಿಗೆ ಮತ್ತು ತುರುವೇಕೆರೆ ತಾಲೂಕಿನಲ್ಲಿ ಓರ್ವ ವ್ಯಕ್ತಿಗೆ ಸೋಂಕು ತಗುಲಿದೆ.