ತುಮಕೂರು: ಜಿಲ್ಲೆಯ ಗಡಿ ಭಾಗದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು ನಿರಂತರ ಪೆಟ್ರೋಲಿಂಗ್ ನಡೆಸುತ್ತಿದ್ದಾರೆ.
ಜಿಲ್ಲಾ ಗಡಿ ಭಾಗದಲ್ಲಿ ಪೊಲೀಸರಿಂದ ತೀವ್ರ ಕಟ್ಟೆಚ್ಚರ - Corona panic
ಜಿಲ್ಲಾದ್ಯಂತ ಗಡಿ ಭಾಗದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಪೊಲೀಸರು ನಿರಂತರ ಪೆಟ್ರೋಲಿಂಗ್ ನಡೆಸುತ್ತಿದ್ದಾರೆ. ಆದರೆ, ಅಡುಗೆ ಎಣ್ಣೆ, ಪಡಿತರ ಪದಾರ್ಥ ಸೇರಿದಂತೆ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಇದರಿಂದ ಯಾವುದೇ ಅಡ್ಡಿಯಾಗಿಲ್ಲ.

ಕೊರೊನಾ ಭೀತಿ: ಗಡಿಯಲ್ಲಿ ಪೊಲೀಸರಿಂದ ತೀವ್ರ ಕಟ್ಟೆಚ್ಚರ
ಕೊರೊನಾ ಭೀತಿ: ಗಡಿಯಲ್ಲಿ ಪೊಲೀಸರಿಂದ ತೀವ್ರ ಕಟ್ಟೆಚ್ಚರ
ನೆರೆಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆ, ಗೌರಿಬಿದನೂರು, ಹಾಸನ, ಮಂಡ್ಯ, ಚಿತ್ರದುರ್ಗ ಜಿಲ್ಲೆಗಳನ್ನು ಸಂಪರ್ಕಿಸುವ ಗಡಿಭಾಗದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೊರ ಜಿಲ್ಲೆ ಮತ್ತು ಹೊರರಾಜ್ಯದಿಂದ ಯಾವುದೇ ವಾಹನಗಳನ್ನು ಒಳಬಿಡಲಾಗುತ್ತಿಲ್ಲ. ಕೊರಟಗೆರೆ-ಗೌರಿಬಿದನೂರು, ಮಧುಗಿರಿ- ಗೌರಿಬಿದನೂರು ಹಾಗೂ ಆಂಧ್ರಪ್ರದೇಶದ ಗಡಿಯಲ್ಲಿ ವಿಶೇಷ ನಿಗಾ ವ್ಯವಸ್ಥೆ ಜಾರಿಯಲ್ಲಿದೆ.
ಇನ್ನು, ಅಡುಗೆ ಎಣ್ಣೆ, ಪಡಿತರ ಪದಾರ್ಥ ಸೇರಿದಂತೆ ಅವಶ್ಯಕ ವಸ್ತುಗಳ ಸಾಗಣಿಕೆಗೆ ಇದರಿಂದ ಯಾವುದೇ ಅಡ್ಡಿಯಾಗಿಲ್ಲ.