ಕರ್ನಾಟಕ

karnataka

ETV Bharat / state

ತುಮಕೂರು ಜಿಲ್ಲೆಯಲ್ಲಿ ಕೊರೊನಾಗೆ ಮೂರನೇ ಬಲಿ - Corona Death in Tumkur news

ತೀವ್ರ ಉಸಿರಾಟದ ತೊಂದರೆಯಿಂದ ಮಹಿಳೆ ಬಳಲುತ್ತಿದ್ದರು. ಎರಡು ದಿನಗಳಿಂದ ವೆಂಟಿಲೇಟರ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Corona patient Death in Tumkur
ಕೊರೊನಾಗೆ ಮೂರನೇ ಬಲಿ

By

Published : May 25, 2020, 7:53 AM IST

ತುಮಕೂರು : ಕೋವಿಡ್-19 ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸೋಂಕಿತ ಮಹಿಳೆ ನಿನ್ನೆ ರಾತ್ರಿ ಮತಪಟ್ಟಿದ್ದಾರೆ. ಈ ಮೂಲಕ ತುಮಕೂರು ಜಿಲ್ಲೆಯಲ್ಲಿ ಕೊರೊನಾಗೆ ಮೂರನೇ ಬಲಿಯಾದಂತಾಗಿದೆ.

ಇವರನ್ನು ಪಿ.1686 ಎಂದು ಗುರುತಿಸಲಾಗಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಮಹಿಳೆ ಬಳಲುತ್ತಿದ್ದರು. ಎರಡು ದಿನಗಳಿಂದ ವೆಂಟಿಲೇಟರ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ವೀರಸಾಗರ ಗ್ರಾಮದವರಾಗಿದ್ದಾರೆ. ಮೇ 22 ರಂದು ತುಮಕೂರಿನ ಕೋವಿಡ್ ಆಸ್ಪತ್ರೆಯಲ್ಲಿ ಪಾಸಿಟಿವ್ ಎಂದು ದೃಢಪಟ್ಟಿತ್ತು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.

ABOUT THE AUTHOR

...view details