ತುಮಕೂರು :ಇಂದು ಕೊರೊನಾ ಸೋಂಕಿನಿಂದ ಮತ್ತೊಬ್ಬ ವ್ಯಕ್ತಿ ಗುಣಮುಖನಾಗಿದ್ದಾನೆ. ಈ ಮೂಲಕ ಜಿಲ್ಲೆಯಲ್ಲಿ ಏಳು ಮಂದಿ ಸೋಂಕಿನಿಂದ ಗುಣಮುಖರಾದಂತಾಗಿದೆ.
ಜಿಲ್ಲೆಯ ಕೋವಿಡ್-19 ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪಿ.1688 ಬಿಡುಗಡೆಗೊಂಡಿದ್ದು, 22 ಮಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೂ 31 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ 2135 ಮಂದಿಯನ್ನು ಕ್ವಾರಂಟೈನ್‌ನಲ್ಲಿರಿಸಲಾಗಿದೆ. 50 ಮಂದಿ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.