ತುಮಕೂರು:ಶಿರಸ್ತೇದಾರರಿಗೆ ಕೊರೊನಾ ಸೋಂಕು ತಗುಲಿದ್ದು, ಜಿಲ್ಲಾಧಿಕಾರಿ ಕಚೇರಿ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದೆ.
ಶಿರಸ್ತೇದಾರಗೂ ಕೊರೊನಾ ಸೋಂಕು: ಜಿಲ್ಲಾಧಿಕಾರಿ ಕಚೇರಿ ಕೆಲಸ ಕಾರ್ಯ ಸ್ಥಗಿತ - Tumkur corona latest news
ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಶಿರಸ್ತೇದಾರರಿಗೆ ಕೊರೊನಾ ಸೋಂಕು ತಗುಲಿದ್ದು, ಕಚೇರಿ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿ
ಅಧಿಕಾರಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಡಿಸಿ ಕಚೇರಿಯ ಒಂದು ಭಾಗವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಕಚೇರಿಯ ಅಕ್ಕಪಕ್ಕದ ಇಲಾಖೆಗಳ ಕಚೇರಿಯ ಎಲ್ಲಾ ವಿಭಾಗವನ್ನು ಮೂರು ದಿನಗಳ ಕಾಲ ಬಂದ್ ಮಾಡಲಾಗಿದ್ದು, ಸಿಬ್ಬಂದಿಗಳಿಗೂ ಕೂಡಾ ಕಚೇರಿಗೆ ಬರದಂತೆ ಸೂಚನೆ ನೀಡಲಾಗಿದೆ.
ಇನ್ನುಳಿದಂತೆ ಜಿಲ್ಲಾಧಿಕಾರಿ ಕಚೇರಿಯ ಕೆಲವು ಇಲಾಖೆಯ ಕೆಲಸ ಕಾರ್ಯಗಳು ಮುಂದುವರಿದಿವೆ.
Last Updated : Aug 13, 2020, 4:11 PM IST