ತುಮಕೂರು: ಜಿಲ್ಲೆಯಲ್ಲಿ ಹೊಸದಾಗಿ 171 ಮಂದಿಯಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ 2,850ಕ್ಕೆ ಏರಿಕೆಯಾಗಿದೆ.
ಗುಣಮುಖ:
ಒಂದೇ ದಿನ 96 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 1,789 ಮಂದಿ ಸಂಪೂರ್ಣ ಚೇತರಿಕೆ ಕಂಡಿದ್ದಾರೆ. 18 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಲ್ಲೂಕುವಾರು ಸೋಂಕಿತರ ವಿವರ:
ತುಮಕೂರು ತಾಲ್ಲೂಕಿನಲ್ಲಿ 55 ಮಂದಿಗೆ ಸೋಂಕು ತಗಲಿದ್ದು, ಶಿರಾ 27, ಕುಣಿಗಲ್ 19, ತಿಪಟೂರು 16 , ಗುಬ್ಬಿ 14, ಪಾವಗಡ 9, ಮಧುಗಿರಿ ಮತ್ತು ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ತಲಾ 8 ಮಂದಿಗೆ, ತುರುವೇಕೆರೆ ತಾಲೂಕಿನಲ್ಲಿ ಐವರಿಗೆ ಸೋಂಕು ತಗುಲಿದೆ.
ಇಂದು 6 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಇದುವರೆಗೆ ಮೃತರ ಸಂಖ್ಯೆ 86ಕ್ಕೆ ಏರಿಕೆಯಾಗಿದೆ.