ಕರ್ನಾಟಕ

karnataka

ETV Bharat / state

ಅತ್ಯಾಚಾರ ಪ್ರಕರಣ: ಕಾಮುಕನಿಗೆ 8 ವರ್ಷ ಜೈಲು, 1 ಲಕ್ಷ ರೂ. ದಂಡ - 8 ವರ್ಷ ಜೈಲುಶಿಕ್ಷೆ

ಯುವತಿ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಮಾಡಿದ್ದ ಆರೋಪಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 8 ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿದೆ.

By

Published : Aug 8, 2019, 9:52 AM IST

ತುಮಕೂರು:ಯುವತಿ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಮಾಡಿದ್ದ ಆರೋಪಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 8 ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ
ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ

2015ರ ಆಗಸ್ಟ್ 29ರಂದು ಆರೋಪಿ ಮಂಜುನಾಥ ಎಂಬಾತ ಮದುವೆಯಾಗುವುದಾಗಿ ಯುವತಿಯನ್ನು ಕರೆದುಕೊಂಡು ಹೋಗಿ ಆಕೆ ಮೇಲೆ ಹಲ್ಲೆ ಮಾಡಿ ಪ್ರಜ್ಞೆ ತಪ್ಪಿಸಿ 2 ಬಾರಿ ಅತ್ಯಾಚಾರ ಮಾಡಿದ್ದ. ತಾಲೂಕಿನ ಅದಲಾಪುರ ಗ್ರಾಮದ ಗಂಗಯ್ಯ ಎಂಬುವರಿಗೆ ಸೇರಿದ್ದ ತೋಟದಲ್ಲಿ ಆರೋಪಿ ಮಂಜುನಾಥ ಯುವತಿಯ ಮೇಲೆ ಅತ್ಯಾಚಾರ ಮಾಡಿದ್ದ.

ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೆ ಪೊಲೀಸರು ನ್ಯಾಯಾಲಯಕ್ಕೆ ಮಂಜುನಾಥ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ABOUT THE AUTHOR

...view details