ತುಮಕೂರು: ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ 480 ಮಂದಿಯ ಮೇಲೆ ತೀವ್ರ ನಿಗಾವಹಿಸಲಾಗಿದೆ. ಈ ಪೈಕಿ 64 ಮಂದಿಯನ್ನು ಹೋಂ ಕ್ವಾರೆಂಟೈನ್ನಲ್ಲಿ ಇರಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರಬಾರದೆಂದು ಸೂಚಿಸಲಾಗಿದೆ.
ಕೋವಿಡ್-19 ಆತಂಕ: ತುಮಕೂರು ಜಿಲ್ಲೆಯ ಜನರಿಗೆ ಸಿಹಿ ಸುದ್ದಿ ನೀಡಿದ್ರು ಆರೋಗ್ಯಾಧಿಕಾರಿ - ಹೋಂ ಕ್ವಾರೆಂಟೈನ್ನಲ್ಲಿ 64 ಮಂದಿ
ಕೊರೊನಾ ಭೀತಿಯಲ್ಲಿದ್ದ ತುಮಕೂರು ಜಿಲ್ಲೆಯ ಜನರಿಗೆ ಸಿಹಿಸುದ್ದಿ ಸಿಕ್ಕಿದೆ. ಈವರೆಗೂ 473 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 326 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿರುವುದರಿಂದ ಇಲ್ಲಿನ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
![ಕೋವಿಡ್-19 ಆತಂಕ: ತುಮಕೂರು ಜಿಲ್ಲೆಯ ಜನರಿಗೆ ಸಿಹಿ ಸುದ್ದಿ ನೀಡಿದ್ರು ಆರೋಗ್ಯಾಧಿಕಾರಿ covid-19 report](https://etvbharatimages.akamaized.net/etvbharat/prod-images/768-512-6809446-830-6809446-1587006021031.jpg)
ಕೋವಿಡ್-19
ಒಟ್ಟು 258 ಮಂದಿಯನ್ನು ಐಸೋಲೇಷನ್ನಲ್ಲಿ ಇಡಲಾಗಿದ್ದು, 306 ಜನರ 28 ದಿನಗಳ ಹೋಂ ಕ್ವಾರೆಂಟೈನ್ ಅವಧಿ ಪೂರ್ಣಗೊಂಡಿದೆ. ಈವರೆಗೂ 473 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 326 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿವೆ.
ಈವರೆಗೆ 2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ. 4 ಮಾದರಿಗಳು ತಿರಸ್ಕೃತಗೊಂಡಿವೆ ಹಾಗೂ 141 ತಪಾಸಣೆಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಿಕಾ ತಿಳಿಸಿದ್ದಾರೆ.