ತುಮಕೂರು:ಜಿಲ್ಲೆಯಲ್ಲಿ ಅದರಲ್ಲಿಯೂ ಜಿಲ್ಲಾ ಕೇಂದ್ರ ತುಮಕೂರು ನಗರದಲ್ಲಿ ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಪ್ರಕರಣಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ.
ತುಮಕೂರು ಮತ್ತು ಶಿರಾ ತಾಲೂಕಿನಲ್ಲಿ ಕೊರೊನಾ ಸೋಂಕಿತರು ವ್ಯಾಪಕವಾಗಿ ಪತ್ತೆಯಾಗುತ್ತಿದ್ದು, ಆರೋಗ್ಯ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ. ನಿತ್ಯ ತುಮಕೂರಿನಿಂದ ಬೆಂಗಳೂರಿಗೆ ಕೆಲಸ ಅರಸಿ ಸುಮಾರು 50 ಸಾವಿರ ಮಂದಿ ಪ್ರಯಾಣ ಬೆಳೆಸುತ್ತಾರೆ. ಇದರಿಂದಾಗಿ ತುಮಕೂರು ನಗರದಲ್ಲಿ ಗಣನೀಯ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ ಎನ್ನಲಾಗ್ತಿದೆ.
ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಬರೋಬ್ಬರಿ 1 ಸಾವಿರ ಮಂದಿಗೆ ಸೋಂಕು ತಗುಲಿದೆ. ಮಾ. 26 ರಂದು 106 ಮಂದಿ ಸೋಂಕಿತರು, ಮಾ. ರಂದು 79 ಮಂದಿ, ಮಾ.28 - 64, ಮಾ.29 - 62, ಮಾ.30 - 45, ಮಾ.31 - 156, ಏ.-01 -99, ಏ.02 -164, ಏ.03 -159, ಏ.04 - 136 ಮಂದಿ ಸೇರಿ ಒಟ್ಟು– 1070 ಸೋಂಕಿತರು ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ.