ತುಮಕೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ, ಸಿಪಿಐಎಂ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ದೆಹಲಿ ರೈತರ ಹೋರಾಟ ಬೆಂಬಲಿಸಿ ಸಿಪಿಐಎಂ ಪ್ರತಿಭಟನೆ
ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಹಾಗೂ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ತುಮಕೂರಿನಲ್ಲಿ ಸಿಪಿಐಎಂ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ದೆಹಲಿ ರೈತರ ಹೋರಾ ಬೆಂಬಲಿಸಿ ಸಿಪಿಐಎಂ ಪ್ರತಿಭಟನೆ
ನಗರದ ಬಸ್ ನಿಲ್ದಾಣದ ಸಮೀಪ ಪ್ರತಿಭಟನೆ ನಡೆಸಿದ ಸಿಪಿಐಎಂ ಕಾರ್ಯಕರ್ತರು, ಕೇಂದ್ರದ ಕೃಷಿ ಕಾಯ್ದೆಗಳು ರೈತರ ಪರವಾಗಿಲ್ಲ. ಬದಲಾಗಿ ಕಾರ್ಪೋರೇಟ್ ಕ್ಷೇತ್ರಕ್ಕೆ ಅನುಕೂಲ ಮಾಡಿಕೊಡುವ ಕಾಯ್ದೆಗಳಾಗಿವೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಕೂಡಲೇ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.