ತುಮಕೂರು:ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರೊಂದಿಗೆ ಕೋವಿಡ್ ಪರಿಸ್ಥಿತಿ ಕುರಿತು ಸಭೆ ನಡೆಸಿರುವುದು ಚರ್ಚೆ ಕಾರಣವಾಗಿದೆ.
ಸಿ.ಟಿ ರವಿ ಅವರು ಸರ್ಕಾರದ ಪ್ರತಿನಿಧಿಯೂ ಅಲ್ಲ, ಸಚಿವರೂ ಅಲ್ಲ. ಬದಲಾಗಿ ಪಕ್ಷವೊಂದರ ಉನ್ನತ ಮಟ್ಟದ ನಾಯಕರು ಮಾತ್ರ. ಹಾಗಿರುವಾಗ ಅವರು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸುವುದು ಎಷ್ಟರ ಮಟ್ಟಿಗೆ ಸರಿ ಎಂಬ ಮಾತುಗಳು ಕೇಳಿ ಬರುತ್ತಿವೆ.
ಈ ಕುರಿತು ಜೆಡಿಎಸ್ ಶಾಸಕ ಡಿ.ಸಿ ಗೌರಿಶಂಕರ್ ಪ್ರತಿಕ್ರಿಯಿಸಿದ್ದು, ತುಮಕೂರು ಜಿಲ್ಲೆಗೂ ಸಿ.ಟಿ ರವಿ ಏನು ಸಂಬಂಧವಿದೆ. ಅವರು ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸುವ ಅಗತ್ಯವೇನಿದೆ? ಮೊದಲಿಗೆ ಚಿಕ್ಕಮಗಳೂರು ಜಿಲ್ಲೆಯ ಮೇಲೆ ಕಾಳಜಿ ವಹಿಸಲಿ. ಅಲ್ಲಿ ಕೋವಿಡ್ ರೋಗಿಗಳಿಗೆ ಎಷ್ಟರ ಮಟ್ಟಿಗೆ ಸೌಲಭ್ಯ ಕಲ್ಪಿಸಲಾಗಿದೆ, ಎಷ್ಟು ಆಸ್ಪತ್ರೆಗಳನ್ನು ಮೀಸಲಿಡಲಾಗಿದೆ ಎಂಬುವುದರ ಬಗ್ಗೆ ಮಾಹಿತಿ ಪಡೆಯಲಿ. ಅದನ್ನು ಬಿಟ್ಟು ಪಕ್ಷದ ನಾಯಕನೆಂಬ ನೆಲೆಯಲ್ಲಿ ದರ್ಪ ತೋರಿಸುವುದು ಸರಿಯಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.