ತುಮಕೂರು: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ತಾಯಿ ಮತ್ತು ಮಗ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ. ಮೂಲತಃ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನರಸಿಂಗನಗಿರಿ ಗ್ರಾಮದವರಾದ ಶೋಭಾ ಅವರು ವಾಸಿಸುತ್ತಿದ್ದ ಕೆ.ಹೆಚ್.ಬಿ ಕಾಲೋನಿಯ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ.
ಎಂದಿನಂತೆ ಶೋಭ ಸಿಲಿಂಡರ್ ಆನ್ ಮಾಡಿ ಟೀ ಮಾಡುವ ವೇಳೆ ರೆಗ್ಯುಲೇಟರ್ ಕಳಚಿಕೊಂಡು, ಸಿಲಿಂಡರ್ ಸ್ಫೋಟಗೊಂಡಿದೆ. ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.