ಕರ್ನಾಟಕ

karnataka

ETV Bharat / state

ತುಮಕೂರು ಜಿಲ್ಲೆಯಲ್ಲಿ ಆಂಧ್ರ ಸೇಂದಿ ಹಂಚಿಕೆಗೆ ಬ್ರೇಕ್ ಹಾಕಲು ಜಿಲ್ಲಾಧಿಕಾರಿ ಪ್ಲಾನ್...... - ಆಂಧ್ರದ ಸೇಂದಿ

ಲೋಕಸಭಾ ಚುನಾವಣೆ ಹಿನ್ನಲೆ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಮುಕ್ತ ಹಾಗೂ ಶಾಂತಿಯುತ ಮತದಾನಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಅಕ್ರಮ ಚಟುವಟಿಕೆಗಳಿಗೆ ಬ್ರೇಕ್​ ಹಾಕಲೂ ಕೂಡ ಸರ್ವಸನ್ನದ್ಧವಾಗಿದೆ.

ಆಂಧ್ರದ ಸೇಂದಿ ಹಂಚಿಕೆಗೆ ಬ್ರೇಕ್ ಹಾಕಲು ಜಿಲ್ಲಾಧಿಕಾರಿ ಪ್ಲಾನ್

By

Published : Mar 20, 2019, 12:53 PM IST

ತುಮಕೂರು:ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ವೇಳೆ ಆಂಧ್ರದ ಸೇಂದಿ ಹಂಚುವ ಪ್ರಯತ್ನಕ್ಕೆ ಕಡಿವಾಣ ಹಾಕಲು ತುಮಕೂರು ಜಿಲ್ಲಾಡಳಿತ ಮುಂದಾಗಿದೆ.

ಹೌದು, ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಮುಕ್ತ ಹಾಗೂ ಶಾಂತಿಯುತ ಮತದಾನಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮದ್ಯ ಮಾರಾಟ ನಿಷೇಧಕ್ಕೆ ಕೂಡ ಸರ್ವಸನ್ನದ್ಧವಾಗಿದೆ. ಅದರಲ್ಲೂ ಮುಖ್ಯವಾಗಿ ನೆರೆ ರಾಜ್ಯ ಆಂಧ್ರಪ್ರದೇಶದಿಂದ ಸೇಂದಿಯನ್ನು ತಂದು ರಾಜ್ಯದ ಮತದಾರರಿಗೆ ಹಂಚಲಿದ್ದಾರೆ ಎಂಬ ಮಾಹಿತಿ ಪಡೆದಿರೋ ತುಮಕೂರು ಜಿಲ್ಲಾಧಿಕಾರಿ ಆಂಧ್ರಪ್ರದೇಶದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಆಂಧ್ರದ ಸೇಂದಿ ಹಂಚಿಕೆಗೆ ಬ್ರೇಕ್ ಹಾಕಲು ಜಿಲ್ಲಾಧಿಕಾರಿ ಪ್ಲಾನ್

ತುಮಕೂರು ಜಿಲ್ಲೆಗೆ ಹೊಂದಿಕೊಂಡಂತಿರೋ ಆಂಧ್ರದ ಅನಂತಪುರಂ ಜಿಲ್ಲೆಯ ಜಿಲ್ಲಾಧಿಕಾರಿ ವೀರ ಪಾಂಡ್ಯನ್ ಜೊತೆ ತುಮಕೂರು ಜಿಲ್ಲಾಧಿಕಾರಿ ರಾಕೇಶಕುಮಾರ್ ಈಗಾಗಲೇ ಸುಧೀರ್ಘ ಮಾತುಕತೆ ನಡೆಸಿದ್ದಾರೆ. ಆಂಧ್ರಪ್ರದೇಶದಲ್ಲಿ ಸೇಂದಿ ಮಾರಾಟಕ್ಕೆ ಯಾವುದೇ ನಿರ್ಬಂಧವಿಲ್ಲ. ಆದ್ರೆ, ಕರ್ನಾಟಕದಲ್ಲಿ ಸೇಂದಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಹೀಗಾಗಿ ಚುನಾವಣೆ ವೇಳೆ ಹೆಚ್ಚಿನ ಪ್ರಮಾಣದಲ್ಲಿ ಜಿಲ್ಲೆ ಗಡಿ ಭಾಗವಾಗಿರೋ ಪಾವಗಡ ತಾಲೂಕಿನಲ್ಲಿ ಸೇಂದಿಯನ್ನು ಆಂಧ್ರದಿಂದ ತಂದು ಮತದಾರರಿಗೆ ಹಂಚುವ ಸಾಧ್ಯತೆ ಇದೆ. ಇದನ್ನು ತಡೆಗಟ್ಟಲು ಎರಡೂ ಜಿಲ್ಲೆಯ ಅಬಕಾರಿ ಅಧಿಕಾರಿಗಳು ಯಾವ ರೀತಿಯ ಸಮನ್ವಯತೆ ಇರಬೇಕು ಎಂಬುದರ ಕುರಿತು ಸುತ್ತೋಲೆಯನ್ನು ಹೊರಡಿಸಲಾಗಿದೆ.

ಇನ್ನೂ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ಜಿಲ್ಲೆಯಲ್ಲಿ 84 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ. ಪೊಲೀಸ್ ಇಲಾಖೆ ವತಿಯಿಂದಲೂ ಕೂಡ 22 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ ಒಂದು ಕೋಟಿ ರೂ. ಮೌಲ್ಯಕ್ಕೂ ಹೆಚ್ಚು ಅಕ್ರಮ ಮದ್ಯ ವನ್ನು ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ ಅಲ್ಲದೆ 18 ವಾಹನಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ. ಇನ್ನೊಂದೆಡೆ ದ್ವಿಚಕ್ರ ವಾಹನದಲ್ಲಿ ಅಕ್ರಮ ಮದ್ಯವನ್ನು ಸಾಗಿಸುತ್ತಿರುವುದು ಕಂಡುಬರುತ್ತಿದ್ದು, ಅದಕ್ಕೆ ಕಡಿವಾಣ ಹಾಕಲು ಸಹ ಜಿಲ್ಲಾ ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿಸಿದರು.

ಅಲ್ಲದೆ ಜಿಲ್ಲೆಯಲ್ಲಿ 23 ಚೆಕ್ ಪೋಸ್ಟ್, 33 ಫ್ಲೈಯಿಂಗ್ ಸ್ಕ್ವಾಡ್ನ ಅಧಿಕಾರಿಗಳು ದಿನದ 24 ಗಂಟೆ ಕಾರ್ಯ ಪ್ರವೃತ್ತರಾಗಿದ್ದಾರೆ ಎಂದು ಈ ವೇಳೆ ತಿಳಿಸಿದರು.

ABOUT THE AUTHOR

...view details