ತುಮಕೂರು:ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ವ್ಯಾಪಕ ಪ್ರಮಾಣದಲ್ಲಿ ಹರಡಿದ್ದು, ಅದರಲ್ಲೂ ಮುಖ್ಯವಾಗಿ ಹೋಂ ಐಸೋಲೇಷನ್ನಲ್ಲಿರೋ ಸೋಂಕಿತರು ಮುಂಜಾಗ್ರತೆ ಕ್ರಮಗಳನ್ನು ವಹಿಸುತ್ತಿಲ್ಲ ಎಂಬ ಒಂದು ಮಾಹಿತಿ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ.
ಹೋಂ ಐಸೋಲೇಷನ್ನಲ್ಲಿರೋ ಸೋಂಕಿತರಿಗೆ ಧೈರ್ಯ ತುಂಬಿದ ಜಿಲ್ಲಾಧಿಕಾರಿ ಪಾಟೀಲ್ - ತುಮಕೂರು
ಗ್ರಾಮೀಣ ಪ್ರದೇಶದಲ್ಲಿ ಹೋಂ ಐಸೋಲೇಷನ್ನಲ್ಲಿರುವ ಸೋಂಕಿತರ ಬಳಿ ತೆರಳಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ಮಾಡುತ್ತಿದ್ದಾರೆ.
YS Patil
ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿ ಹೋಂ ಐಸೋಲೇಷನ್ನಲ್ಲಿರುವ ಸೋಂಕಿತರ ಬಳಿ ತೆರಳಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ಮಾಡುತ್ತಿದ್ದಾರೆ.
ತುಮಕೂರು ತಾಲೂಕಿನ ಗೂಳೂರಿನಲ್ಲಿ ಕೋವಿಡ್ ಸೋಂಕಿನಿಂದ ಮನೆಯಲ್ಲೇ ಚಿಕಿತ್ಸೆಗೆ ಒಳಗಾಗಿರುವ ಜನರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿ ಡಾ.ಕೋನ ವಂಸಿ ಕೃಷ್ಣ ಅವರುಗಳು, ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಿದರು. ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ನಿರ್ಭೀತಿಯಿಂದ ಇರುವಂತೆ ಹಾಗೂ ಜಾಗರೂಕತೆ ವಹಿಸುವಂತೆ ಸಲಹೆ ನೀಡಿದರು.