ತುಮಕೂರು:ತುಮಕೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕನ್ನು ಸರ್ಕಾರ ಸೂಪರ್ ಸೀಡ್ ಮಾಡಿರುವುದನ್ನು ಅಲ್ಲಿನ ಸಿಬ್ಬಂದಿ ಖಂಡಿಸಿದ್ದಾರೆ. ಅಲ್ಲದೆ, ಬ್ಯಾಂಕಿನ ಸಿಬ್ಬಂದಿ ಇಂದು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಜೆಡಿಎಸ್ - ಕೆ ಎನ್ ರಾಜಣ್ಣ ಮಧ್ಯೆ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ವಾರ್
ತುಮಕೂರು ಜಿಲ್ಲಾ ಸಹಕಾರ ಬ್ಯಾಂಕನ್ನು ಸರ್ಕಾರ ಸೂಪರ್ ಸೀಡ್ ಮಾಡಿರುವುದನ್ನು ಖಂಡಿಸಿ ಬ್ಯಾಂಕಿನ ಸಿಬ್ಬಂದಿ ಇಂದು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಕಪ್ಪು ಪಟ್ಟಿ ಧರಿಸಿ ಎಂದಿನಂತೆ ತಮ್ಮ ಕೆಲಸ ಕಾರ್ಯದಲ್ಲಿ ತೊಡಗಿಕೊಂಡ ಸಿಬ್ಬಂದಿ ಪ್ರತಿದಿನ ಎರಡು ಬಾರಿ ಸರ್ಕಾರದ ನಿರ್ಧಾರವನ್ನು ಖಂಡಿಸಿ ಧರಣಿ ನಡೆಸುವುದಾಗಿ ತಿಳಿಸಿದರು.
ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ
ಇನ್ನೊಂದೆಡೆ ಬ್ಯಾಂಕ್ ಅಧ್ಯಕ್ಷರಾಗಿದ್ದ ಕೆ ಎನ್ ರಾಜಣ್ಣ ಅವರ ಅವಧಿಯಲ್ಲಿ ಸಾಕಷ್ಟು ಗ್ರಾಹಕರು ಬ್ಯಾಂಕಿನಲ್ಲಿ ಠೇವಣಿ ಇಟ್ಟಿದ್ದರು. ಇದೀಗ ಠೇವಣಿಯನ್ನು ಗ್ರಾಹಕರು ವಾಪಸ್ ಪಡೆಯಲು ಮುಂದಾಗಿದ್ದಾರೆ ಎನ್ನಲಾಗ್ತಿದೆ.
ಈಗಾಗಲೇ ಸರ್ಕಾರ ನೇಮಕ ಮಾಡಿರುವ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆಗಿರುವಂತಹ ರಾಕೇಶ್ ಕುಮಾರ್ ಅವರ ಮೇಲೆ ನಮಗೆ ಯಾವುದೇ ನಂಬಿಕೆ ಇಲ್ಲವೆಂದು ವಿಎಸ್ಎಸ್ಎನ್ ಅಧ್ಯಕ್ಷರು ಮತ್ತು ಸದಸ್ಯರು ಹೇಳುತ್ತಿದ್ದಾರೆ. ಈ ಕುರಿತು ಅವರು ಈಟಿವಿ ಭಾರತ ಪ್ರತಿನಿಧಿಯೊಂದಿಗೆ ಮಾತನಾಡಿದ್ದಾರೆ.