ಕರ್ನಾಟಕ

karnataka

ETV Bharat / state

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಆಟದ ಮೈದಾನಕ್ಕೆ ಡಿಸಿಎಂ ಅಶ್ವತ್ಥ್​​ ನಾರಾಯಣ ದಿಢೀರ್ ಭೇಟಿ! - ಡಿಸಿಎಂ ಅಶ್ವಥ್​ ನಾರಾಯಣ್​ ಪಾಲಿಟೆಕ್ನಿಕ್ ಕಾಲೇಜಿನ ಆಟದ ಮೈದಾನಕ್ಕೆ ದಿಢೀರ್ ಭೇಟಿ

ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ  ತುಮಕೂರಿನ ಪಾಲಿಟೆಕ್ನಿಕ್ ಕಾಲೇಜಿನ ಆಟದ ಮೈದಾನಕ್ಕೆ ದಿಢೀರ್ ಭೇಟಿ ನೀಡಿದರು.

tumkur
ಡಿಸಿಎಂ ಅಶ್ವಥ್​ ನಾರಾಯಣ​

By

Published : Jan 23, 2020, 12:00 AM IST

Updated : Jan 23, 2020, 1:42 AM IST

ತುಮಕೂರು:ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಜಿಲ್ಲೆಯ ಪಾಲಿಟೆಕ್ನಿಕ್ ಕಾಲೇಜಿನ ಆಟದ ಮೈದಾನಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಡಿಸಿಎಂ ಅಶ್ವತ್ಥ್​​ ನಾರಾಯಣ

ಜಿಲ್ಲೆಯ ವಿಶ್ವವಿದ್ಯಾಲಯ ಸಮೀಪದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸುತ್ತಮುತ್ತಲ ಪ್ರದೇಶವನ್ನು ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದರು. ಇನ್ನು ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸಚಿವರಿಗೆ ಸಾಥ್ ನೀಡಿದರು.

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ದಾಖಲಾತಿ ಹೆಚ್ಚಿಸಲು ಹಾಗೂ ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಶಿಕ್ಷಣದ ಮನೋಭಾವವನ್ನು ಮೂಡಿಸಲು ಪೂರಕ ಕ್ರಮ ಕೈಗೊಳ್ಳಬೇಕಿದೆ. ಇನ್ನು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕ್ಯಾಂಪಸ್​​ ರೂಪಿಸಬೇಕಿದೆ. ಇದಕ್ಕಾಗಿ ಸ್ಥಳ ಪರಿಶೀಲನೆ ನಡೆಸಿದ್ದೇನೆ ಎಂದು ಪತ್ರಕರ್ತರಿಗೆ ಮಾಹಿತಿ ನೀಡಿದರು.

ಇನ್ನು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಅಲ್ಲದೇ ಹಾಸ್ಟೆಲ್​ನಲ್ಲಿ ಮೂಲ ಸೌಲಭ್ಯದ ಕೊರತೆ ಇದೆ. ಇದನ್ನು ಸಚಿವರು ಪರಿಗಣಿಸಿ ಕ್ರಮ ಕೈಗೊಳ್ಳಲಿದ್ದಾರೆ ಎಂಬ ಆಶಾಭಾವನೆಯನ್ನು ವಿದ್ಯಾರ್ಥಿಗಳು ವ್ಯಕ್ತಪಡಿಸಿದ್ದಾರೆ.

Last Updated : Jan 23, 2020, 1:42 AM IST

ABOUT THE AUTHOR

...view details