ತುಮಕೂರು : ಜಿಲ್ಲೆಯಲ್ಲಿ ಜಾನುವಾರುಗಳ ಅಂಕಿ ಸಂಖ್ಯೆಯನ್ನೇ ಸಭೆಗೆ ತಪ್ಪಾಗಿ ಮಾಹಿತಿ ಕೊಟ್ಟು ಅದು ಬೆಳಕಿಗೆ ಬರುತ್ತಿದ್ದಂತೆ ತಪ್ಪಿಸಿಕೊಳ್ಳಲು ಟೈಪಿಂಗ್ ಮಿಸ್ಟೇಕ್ ಎಂದು ಪಶುಪಾಲನಾ ಇಲಾಖೆ ಅಧಿಕಾರಿಯೊಬ್ಬರು ಯತ್ನಿಸಿದ ಘಟನೆ ತುಮಕೂರಿನ ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ನಡೆದಿದೆ.
ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಬರ ಪರಿಹಾರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಈ ರೀತಿ ತಪ್ಪು ಮಾಹಿತಿ ನೀಡಿ ಕೆಲಕಾಲ ಕಕ್ಕಾಬಿಕ್ಕಿಯಾದ ಘಟನೆ ನಡೆಯಿತು.
ಅಧಿಕಾರಿಯ ವರ್ತನೆಯಿಂದ ಕೆಂಡಾಮಂಡಲರಾದ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಕಳೆದ ಬಾರಿಯ ಜಿಲ್ಲಾ ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯಲ್ಲಿ 7,24,185 ಜಾನುವಾರುಗಳಿವೆ ಎಂದು ಮಾಹಿತಿ ನೀಡಲಾಗಿತ್ತು. ಆದರೆ ಈ ಸಲದ ಸಭೆಯಲ್ಲಿ ಇಲಾಖೆ ಅಧಿಕಾರಿಗಳು 7,08,185 ಜಾನುವಾರುಗಳಿಗೆ ಎಂದು ಮಾಹಿತಿ ನೀಡಿದರು. ಇದನ್ನು ಪ್ರಶ್ನಿಸಿದ ಪರಮೇಶ್ವರ್ ಅವರ ಮಾತಿಗೆ ಉಪ ನಿರ್ದೇಶಕ ಪ್ರಕಾಶ್ ಕೆಲಕಾಲ ಗೊಂದಲಕ್ಕೀಡಾದರು ನಂತರ ಅದರಿಂದ ತಪ್ಪಿಸಿಕೊಳ್ಳಲು ಟೈಪಿಂಗ್ ಮಿಸ್ಟೇಕ್ ಎಂದು ಹೇಳಿದ್ದಾರೆ.
ಅಧಿಕಾರಿಯ ವರ್ತನೆಯಿಂದ ಕೆಂಡಾಮಂಡಲರಾದ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಪಶು ಸಂಗೋಪನಾ ಇಲಾಖೆ ಅಧಿಕಾರಿಗೆ ನೋಟಿಸ್ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.