ತುಮಕೂರು: ಮಾಜಿ ಶಾಸಕ ಸುರೇಶ್ ಗೌಡ ಅವರು ನನ್ನನ್ನು ಕೊಲೆ ಮಾಡಲು ವ್ಯವಸ್ಥಿತ ಸಂಚು ರೂಪಿಸಿದ್ದಾರೆ. ಹೀಗಾಗಿ ನನಗೆ ಸೂಕ್ತ ರಕ್ಷಣೆ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಿರುವುದಾಗಿ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿಸಿ ಗೌರಿಶಂಕರ್ ತಿಳಿಸಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸುರೇಶ್ ಗೌಡ ಅವರು ನನ್ನ ಕೊಲೆ ಮಾಡಲು ಸಂಚು ರೂಪಿಸಿರುವ ಅನುಮಾನ ಇದೆ. ನನ್ನನ್ನು ಕೊಲೆ ಮಾಡಲು ವ್ಯವಸ್ಥಿತ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದರು. ಅಕಸ್ಮಾತ್ ನಾನು ಅವರ ಕೊಲೆ ಮಾಡಲು ಸಂಚು ರೂಪಿಸಿದ್ದರೆ, ಅವರದೇ ಬಿಜೆಪಿ ಪಕ್ಷದ ಸರ್ಕಾರವಿದೆ. ಈ ಕುರಿತಂತೆ ಸಿಬಿಐ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು.