ಕರ್ನಾಟಕ

karnataka

ETV Bharat / state

Ration ಮನೆಗೆ ತಲುಪಿಸಲು ಕೇಂದ್ರದಿಂದ ನಿರಾಕರಣೆ: ಆಮ್​ ಆದ್ಮಿ ಪಕ್ಷದ ಬೇಸರ - plan to distribute home rations

ಪಡಿತರ ಅಂಗಡಿಗಳ ಎದುರು ಜನ ಪಡಿತರ ಪಡೆಯಲು ಸಾಲುಗಟ್ಟಿ ನಿಲ್ಲುತ್ತಿರುವುದು ಒಂದು ರೀತಿ ಕೊರೊನಾ ಸೋಂಕು ಹರಡುವಿಕೆಯ ಕೇಂದ್ರಗಳಾಗಿ ಪರಿವರ್ತನೆ ಆಗುತ್ತಿವೆ. ಹೀಗಾಗಿ ಜನರ ಮನೆ ಬಾಗಿಲಿಗೆ ಪಡಿತರ ವಿತರಿಸುವ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಸ್ತುವಾರಿ ರೋಮಿ ಭಾಟಿ ಹೇಳಿದರು.

delhi-governments-plan-to-distribute-home-rations-rejection-from-the-central
delhi-governments-plan-to-distribute-home-rations-rejection-from-the-central

By

Published : Jun 23, 2021, 5:58 PM IST

ತುಮಕೂರು:ದೆಹಲಿಯಲ್ಲಿ ಪಡಿತರವನ್ನು ಜನರ ಮನೆಗೆ ತಲುಪಿಸುವ ಯೋಜನೆಗೆ ಕೇಂದ್ರ ಸರ್ಕಾರ 4 ನಾಲ್ಕು ಬಾರಿ ನಿರಾಕರಣೆ ಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಸ್ತುವಾರಿ ರೋಮಿ ಭಾಟಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಪಕ್ಷದ ಸಂಘಟನೆ ದೃಷ್ಟಿಯಿಂದ ಆಗಮಿಸಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿ, ಪಡಿತರ ಅಂಗಡಿಗಳ ಎದುರು ಜನ ಪಡಿತರ ಪಡೆಯಲು ಸಾಲುಗಟ್ಟಿ ನಿಲ್ಲುತ್ತಿರುವುದು ಒಂದು ರೀತಿ ಕೊರೊನಾ ಸೋಂಕು ಹರಡುವಿಕೆಯ ಕೇಂದ್ರಗಳಾಗಿ ಪರಿವರ್ತನೆ ಆಗುತ್ತಿವೆ.

ಹೀಗಾಗಿ ಜನರ ಮನೆ ಬಾಗಿಲಿಗೆ ಪಡಿತರ ವಿತರಿಸುವ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಈ ಯೋಜನೆ ಜಾರಿ ಆದ್ರೆ ದೆಹಲಿಯಲ್ಲಿ ಸೋಂಕಿನ ಪ್ರಮಾಣವನ್ನು ತಗ್ಗಿಸಬಹುದಾಗಿದೆ ಎಂದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯ ಉಸ್ತುವಾರಿ ರೋಮಿ ಭಾಟಿ

ಇಂತಹ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರ ನಿರಾಕರಣೆ ಮಾಡುತ್ತಿರುವುದು ಸರಿಯಲ್ಲ. ಈ ಯೋಜನೆಯಿಂದ ಜನರ ಆರೋಗ್ಯವನ್ನು ಕಾಪಾಡಿದಂತಾಗುತ್ತದೆ. ಸರಿ ಸುಮಾರು 50 ಲಕ್ಷ ಬಿಪಿಎಲ್ ಕಾರ್ಡ್​ದಾರರು ಇದರ ಪ್ರಯೋಜನೆ ಪಡೆಯಬಹುದಾಗಿದೆ. ಕೇಂದ್ರ ಸರ್ಕಾರ ದೆಹಲಿ ಸರ್ಕಾರ ಮನವಿಗೆ ಅನುಮೋದನೆ ನೀಡಬೇಕಿದೆ ಎಂದು ಒತ್ತಾಯಿಸಿದರು.

ABOUT THE AUTHOR

...view details