ತುಮಕೂರು: ಅಪರಿಚಿತ ಮಹಿಳೆವೋರ್ವಳು ಅರ್ಧ ಬೆಂದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಾಲೂಕಿನ ನೆಲಹಾಳ ಬಳಿ ನಡೆದಿದೆ. ದುಷ್ಕರ್ಮಿಗಳು ಮಹಿಳೆಯನ್ನು ಕೊಂದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.
ನಿರ್ಜನ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸ್ ವಿಶೇಷ ತಂಡ ರಚನೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ಕೋನ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.