ತುಮಕೂರು: ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿರುವವರಿಗೂ 2 ತಿಂಗಳ ಪಡಿತರವನ್ನು ನೀಡಲು ನಿರ್ಧರಿಸಲಾಗಿದೆ. ಕಾರ್ಡ್ಗಳನ್ನು ನಂತರದ ದಿನಗಳಲ್ಲಿ ವಿತರಿಸಲಾಗುವುದು ಎಂದು ಆಹಾರ, ನಾಗರಿಕ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.
ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಿರುವ 2 ಲಕ್ಷ ಮಂದಿಗೂ ಪಡಿತರ ವಿತರಣೆ: ಸಚಿವ ಗೋಪಾಲಯ್ಯ - Minister Gopalya
ಸುಮಾರು ಎರಡು ಲಕ್ಷ ಜನ ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರಿಗೂ 2 ತಿಂಗಳ ಪಡಿತರವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಆಹಾರ, ನಾಗರಿಕ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.
ಸಚಿವ ಕೆ. ಗೋಪಾಲಯ್ಯ
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇದುವರೆಗೂ ಸುಮಾರು ಎರಡು ಲಕ್ಷ ಜನ ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಲೋಪ ಎಸಗಿದ ಇದುವರೆಗೂ 10 ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಪಡಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳು ದೂರ ಇದ್ದರೆ ಗ್ರಾಮಗಳಿಗೆ ತೆರಳಿ ಶಾಲೆ ಬಳಿ ಜನರಿಗೆ ವಿತರಿಸುವಂತೆ ಸೂಚನೆ ನೀಡಲಾಗಿದೆ ಎಂದರು.
Last Updated : Apr 10, 2020, 10:32 PM IST