ಪಾವಗಡ/ತುಮಕೂರು:ದೇಶದಲ್ಲಿ ಲಾಕ್ಡೌನ್ ಜಾರಿಯಾದ ನಂತರ ಅಸಂಘಟಿತ ವರ್ಗದ ಜೀವನ ದುಸ್ಥರವಾದ ಹಿನ್ನೆಲೆಯಲ್ಲಿ 2.50 ಲಕ್ಷ ವೆಚ್ಚದಲ್ಲಿ ಪಡಿತರ ವಿತರಣೆ ಮಾಡಲಾಗುತ್ತಿದೆ ಎಂದು ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಗಳ ಮುಖ್ಯಸ್ಥರಾದ ಡಾ.ಜಿ.ವೆಂಕಟರಾಮಯ್ಯ ತಿಳಿಸಿದರು.
ದಿನಕೂಲಿ ಕಾರ್ಮಿಕರಿಗೆ 2.50 ಲಕ್ಷ ವೆಚ್ಚದಲ್ಲಿ ಪಡಿತರ ವಿತರಣೆ: ಡಾ.ಜಿ.ವೆಂಕಟರಾಮಯ್ಯ - Distribution of rations at a cost of Rs 2.50 lakh
ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ಆಟೋ ಚಾಲಕರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ, ಕಟ್ಟಡ ಕಾರ್ಮಿಕರಿಗೆ ಹಾಗೂ ದಿನಕೂಲಿ ಕಾರ್ಮಿಕರಿಗೆ ಸೇರಿದಂತೆ ಒಂದು ಸಾವಿರ ಜನರಿಗೆ 2.50 ಲಕ್ಷದ ವೆಚ್ಚದಲ್ಲಿ ಪಡಿತರ ವಿತರಣೆ ಮಾಡಲಾಗುತ್ತಿದೆ ಎಂದು ಮುಖ್ಯಸ್ಥರಾದ ಡಾ.ಜಿ.ವೆಂಕಟರಾಮಯ್ಯ ತಿಳಿಸಿದರು.
ಪಾವಗಡ ಪಟ್ಟಣದ ಶ್ರೀನಿವಾಸ ನಗರದಲ್ಲಿನ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ಆಟೋ ಚಾಲಕರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ, ಕಟ್ಟಡ ಕಾರ್ಮಿಕರಿಗೆ ಹಾಗೂ ದಿನಕೂಲಿ ಕಾರ್ಮಿಕರಿಗೆ ಸೇರಿದಂತೆ ಒಂದು ಸಾವಿರ ಜನರಿಗೆ 2.50 ಲಕ್ಷದ ವೆಚ್ಚದಲ್ಲಿ ಪಡಿತರ ವಿತರಣೆ ಮಾಡಲಾಗಿದ್ದು, ಇಂತಹ ಸಂದರ್ಭದಲ್ಲಿ ಯಾರೇ ಆಗಲಿ ಸ್ವಯಂ ಪ್ರೇರಿತವಾಗಿ ಮುಂದೆ ಬಂದು ಬಡವರಿಗೆ ಸಹಾಯ ಮಾಡಬೇಕಾದ ಅನಿವಾರ್ಯತೆ ಇದೆ ಎಂದರು.
ಇನ್ನು ದೇಶದಲ್ಲಿ ಆರ್ಥಿಕತೆಯ ಮೇಲೆ ಪ್ರಭಾವ ಬೀರುತ್ತಿದೆ. ಇದರಿಂದ ಅಸಂಘಟಿತ ವಲಯ ನೆಲ ಕಚ್ಚುವ ಪರಿಸ್ಥಿತಿ ಎದುರಾಗಿದ್ದು, ಈ ವೇಳೆ ದಾನಿಗಳು ಸ್ವಯಂ ಪ್ರೇರಿತರಾಗಿ ಸಹಾಯ ಮಾಡಬೇಕು ಎಂದರು.