ತುಮಕೂರು: ಮಂಗಳವಾರ ರಾತ್ರಿ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಶಿರಾ ಶಾಸಕ ಸತ್ಯನಾರಾಯಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಗರಕ್ಕೆ ಆಗಮಿಸಿದ್ದರು.
ಶಾಸಕ ಸತ್ಯನಾರಾಯಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಡಿಕೆಶಿ - ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಅನಾರೋಗ್ಯದಿಂದ ಮೃತಪಟ್ಟ ಶಿರಾ ಶಾಸಕ ಸತ್ಯನಾರಾಯಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಡೆದರು.
ಶಾಸಕ ಸತ್ಯನಾರಾಯಣ ಮೃತದೇಹದ ಅಂತಿಮ ದರ್ಶನ ಪಡೆದ ಡಿಕೆಶಿ
ಇದೇ ವೇಳೆ ಮಾಜಿ ಶಾಸಕ ಟಿ.ಬಿ. ಜಯಚಂದ್ರ, ರಫೀಕ್ ಅಹಮದ್ ಹಾಜರಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬರಮಾಡಿಕೊಂಡರು.
ಶಿರಾ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಂತಾಪ ಸೂಚಕ ಸಭೆಯನ್ನು ನಡೆಸಿದರು.
Last Updated : Aug 5, 2020, 6:03 PM IST