ತುಮಕೂರು: ಯಾರೂ ಕೂಡ ಮೂರು ತಿಂಗಳವರೆಗೆ ಮನೆ ಬಾಡಿಗೆ, ವಿದ್ಯುತ್ ಬಿಲ್ ಪಾವತಿಗೆ ಒತ್ತಾಯಿಸಬಾರದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದ್ದಾರೆ.
ಮನೆ ಬಾಡಿಗೆಗೆ ಒತ್ತಾಯಿಸಿದರೆ ಕಠಿಣ ಕ್ರಮ: ಡಿಸಿಎಂ ಕಾರಜೋಳ - ವಿದ್ಯುತ್ ಬಿಲ್ ಪಾವತಿ
ರಾಜ್ಯದಲ್ಲಿ ಮನೆ ಬಾಡಿಗೆ, ವಿದ್ಯುತ್ ಬಿಲ್ ಪಾವತಿಗೆ ಒತ್ತಾಯಿಸಬಾರದು. ಹಾಗೆಯೇ ಒತ್ತಾಯಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ.
ಡಿಸಿಎಂ ಗೋವಿಂದ ಕಾರಜೋಳ
ಸರ್ಕಾರದ ನಿಯಮ ಮೀರಿ ನಡೆದುಕೊಂಡರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಮನೆ ಮಾಲೀಕರು ಬಾಡಿಗೆಗೆ ಒತ್ತಾಯಪಡಿಸಿದರೆ ತಹಶೀಲ್ದಾರ್, ಜಿಲ್ಲಾಧಿಕಾರಿಗಳಿಗೆ ದೂರು ನೀಡಬಹುದು. ಮನೆ ಬಾಡಿಗೆಗೆ 3 ತಿಂಗಳ ಗಡುವು ನೀಡಬೇಕು ಎಂದರು.