ತುಮಕೂರು : ನಗರದಲ್ಲಿ ಬಾಣಂತಿ ಹಾಗೂ ಅವಳಿ ಮಕ್ಕಳು ಅಸುನೀಗಿದ ಹೃದಯ ವಿದ್ರಾವಕ ಘಟನೆ ಸಂಬಂಧ ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುನಾಥ್ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ.ವೀಣಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಬಾಣಂತಿ ಆಸ್ಪತ್ರೆಗೆ ದಾಖಲಿಸಿಕೊಳ್ಳದ ವೈದ್ಯರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಜೊತೆಗೆ ಕರ್ತವ್ಯದಲ್ಲಿದ್ದ ಡಾಕ್ಟರ್ ಹಾಗೂ ಸಿಬ್ಬಂದಿ ಅಮಾನತುಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದು, ಅಮಾನತುಗೊಳಿಸುವವರೆಗೂ ಶವಗಳನ್ನು ತೆಗೆಯಲು ಬಿಡುವುದಿಲ್ಲ ಎಂದು ಪಟ್ಟುಹಿಡಿದರು. ಈ ಸಂದರ್ಭ ಹೆರಿಗೆ ಮಾಡಿಸಲು ಆಧಾರ್, ತಾಯಿ ಕಾರ್ಡ್ ಕಡ್ಡಾಯವಲ್ಲ.