ತುಮಕೂರು:ದೆಹಲಿಯಲ್ಲಿ ತಬ್ಲಿಘಿ ಸಮಾವೇಶ ನಡೆಸಲು ಅವಕಾಶ ನೀಡಿರಲಿಲ್ಲ ಹೀಗಿದ್ದರೂ ನಡೆಸಲಾಗಿದೆ ಎಂದು ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ದೆಹಲಿಯಲ್ಲಿ ತಬ್ಲಿಘಿ ಸಮಾವೇಶ ನಡೆಸಲು ಅವಕಾಶ ನೀಡಿರಲಿಲ್ಲ: ಡಾ.ಜಿ ಪರಮೇಶ್ವರ್ - ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್
ದೆಹಲಿಯಲ್ಲಿ ತಬ್ಲಿಘಿ ಸಮಾವೇಶ ನಡೆಸಲು ಅನುಮತಿ ನೀಡಿರಲಿಲ್ಲ. ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದವರು ಕೊರೊನಾ ಪರೀಕ್ಷೆಗೆ ಒಳಗಾಗಬೇಕು ಎಂದು ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಮನವಿ ಮಾಡಿದ್ದಾರೆ.

ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತಂತೆ ದೆಹಲಿ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಅದರ ಬಗ್ಗೆ ಕ್ರಮ ಕೈಗೊಳ್ಳಲಿದೆ ಎಂದರು. ಸಮಾವೇಶದಲ್ಲಿ ಭಾಗವಹಿಸಿದ್ದ ಜಿಲ್ಲೆಯ ಮುಸ್ಲಿಂ ಬಾಂಧವರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಇಲ್ಲದಿದ್ದರೆ ಅದು ತಪ್ಪಾಗುತ್ತದೆ ಎಂದು ಹೇಳಿದರು.
ಸಮಾವೇಶಕ್ಕೆ ಹೋಗಬಾರದಿತ್ತು ಅಥವಾ ಭಾಗವಹಿಸ ಬಾರದಿತ್ತು ಎಂಬ ಕುರಿತಂತೆ ಆ ನಂತರ ಚರ್ಚೆ ಮಾಡೋಣ. ಮೊದಲಿಗೆ ಸಮಾವೇಶದಲ್ಲಿ ಭಾಗವಹಿಸಿದ್ದವರು ಪರೀಕ್ಷೆಗೆ ಒಳಗಾಗಬೇಕು ಎಂದು ಮನವಿ ಮಾಡಿದರು. ಇಲ್ಲದಿದ್ದರೆ ಮನೆಯಲ್ಲೇ ಉಳಿದುಕೊಂಡು ಹೊರಗೆ ಬರದಂತೆ ಜಾಗೃತಿ ವಹಿಸಿ. ಕಾಯಿಲೆಯ ಗುಣಲಕ್ಷಣಗಳು ಕಂಡು ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದು ಹೇಳಿದರು.