ತುಮಕೂರು:ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮದೇ ಪಕ್ಷದವರು ಸೋಲಿಸಿದರು ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಹೇಳಿಕೆ ಬಗ್ಗೆ ರಾಜ್ಯಾದ್ಯಂತ ಗಂಭೀರ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಜನಪ್ರಿಯ ಮುಖ್ಯಮಂತ್ರಿ ಸೋತಾಗ ಸ್ವಾಭಾವಿಕವಾಗಿ ನೋವಾಗುತ್ತದೆ ಎಂದಿದ್ದಾರೆ.