ಕರ್ನಾಟಕ

karnataka

ETV Bharat / state

ರಸ್ತೆಗೆ ಹರಿಯುವ ಚರಂಡಿ ನೀರು: ತುಮಕೂರಲ್ಲಿ ಕೇಳೋರಿಲ್ಲ ವಾಹನ ಸವಾರರ ಗೋಳು! - Drainage water on Tumkur Road

ಕಲ್ಪವೃಕ್ಷ ನಗರಿ ತುಮಕೂರಿನಲ್ಲಿ ವಾಹನ ಸವಾರರಿಗೆ ಎಲ್ಲಿಲ್ಲದ ಕಿರಿಕಿರಿ ಉಂಟಾಗುತ್ತಿದೆ. ಇದಕ್ಕೆ ಕಾರಣ ಇಲ್ಲಿರುವ ರಸ್ತೆ ಮತ್ತು ಚರಂಡಿಗಳು. ಪಾಲಿಕೆಯ ನಿರ್ಲಕ್ಷ್ಯಕ್ಕೆ ಜನ ಬೇಸರ ವ್ಯಕ್ತಪಡಿಸಿದ್ದಾರೆ.

ರಸ್ತೆಗೆ ಹರಿಯುವ ಚರಂಡಿ ನೀರು

By

Published : Oct 23, 2019, 5:38 PM IST

ತುಮಕೂರು: ನಗರದ ಅಶೋಕ ರಸ್ತೆಯಲ್ಲಿ ಮಳೆಯ ನೀರು ಚರಂಡಿಯಲ್ಲಿ ಹರಿಯದೆ ರಸ್ತೆಯ ಮೇಲೆ ಹರಿದು ನಿತ್ಯ ವಾಹನ ಸವಾರರಿಗೆ ಕಿರಿಕಿರಿಯಾಗುತ್ತಿದೆ.

ರಸ್ತೆಗೆ ಹರಿಯುವ ಚರಂಡಿ ನೀರು
ಚರಂಡಿಗಳಲ್ಲಿ ಪ್ಲಾಸ್ಟಿಕ್, ಕಸ ತುಂಬಿದ್ದು, ಮಳೆ ನೀರು ಹರಿದು ಹೋಗಲು ಸಾಧ್ಯವಾಗದೆ ರಸ್ತೆಯ ಮೇಲೆ ಹರಿಯುತ್ತಿರುವುದರಿಂದ ಡಾಂಬರ್​ ಸಹ ಕಿತ್ತುಹೋಗಿದೆ. ಇದರಿಂದ ರಸ್ತೆಯಲ್ಲಿ ಗುಂಡಿಗಳಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿದ್ದು, ಮಹಾನಗರ ಪಾಲಿಕೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಸ್ತೆಗಳು ಸಹ ಕಳಪೆಯಾಗಿದ್ದು, ವಾಹನ ಸವಾರರು, ಅಧಿಕಾರಿಗಳು ಮತ್ತು ಕಂಟ್ರಾಕ್ಟರ್​​ಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ABOUT THE AUTHOR

...view details