ಕರ್ನಾಟಕ

karnataka

ETV Bharat / state

ಎಸ್​​​ಎಸ್​​ಎಲ್​​ಸಿ ಪರೀಕ್ಷೆ ವಿಭಿನ್ನವಾಗಿ ನಡೆಯಲಿದೆ: ಸಚಿವ ಎಸ್. ಸುರೇಶ್ ಕುಮಾರ್

ಕೊರೊನಾದಿಂದಾಗಿ ಈ ಬಾರಿ ಎಸ್​​​ಎಸ್​​ಎಲ್​​ಸಿ ಪರೀಕ್ಷೆಯನ್ನು ಸ್ವಲ್ಪ ವಿಭಿನ್ನವಾಗಿ ನಡೆಸಲಿದ್ದು, ಪರೀಕ್ಷೆಗೆ ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಸಿದ್ಧತೆಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

By

Published : May 31, 2020, 5:09 PM IST

Education Minister S Suresh Kumar Statement
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್

ತುಮಕೂರು: ಕೊರೊನಾ ಭೀತಿಯಿಂದ ಎಸ್​​​ಎಸ್​​ಎಲ್​​ಸಿ ಪರೀಕ್ಷೆಗಳನ್ನು ಸ್ವಲ್ಪ ವಿಭಿನ್ನವಾಗಿ ನಡೆಸಲಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಿನ್ನೆಲೆ ಪರೀಕ್ಷೆ ಬರೆಯುವ ಕೊಠಡಿಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೀಕ್ಷೆಗೆ ಹಾಜರಾಗುವ ಪ್ರತಿ ವಿದ್ಯಾರ್ಥಿಗೂ ಮಾಸ್ಕ್​​ ವಿತರಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆಯನ್ನು ಮಾಡಲಾಗುವುದು. ಪ್ರತಿಯೊಬ್ಬ ವಿದ್ಯಾರ್ಥಿಗೂ ಥರ್ಮಲ್ ಸ್ಕ್ಯಾನಿಂಗ್ ಮಾಡುವ ಮೂಲಕ ಆರೋಗ್ಯದ ಬಗ್ಗೆ ಗಮನ ವಹಿಸಲಾಗುವುದು ಎಂದರು.

ಪರೀಕ್ಷೆಗೆ ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಸಿದ್ಧತೆಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದೇನೆ. ಏಕೆಂದರೆ ವಿಶೇಷ ಸಂದರ್ಭದಲ್ಲಿ ವಿಶೇಷ ವಾತಾವರಣದಲ್ಲಿ ಈ ಬಾರಿ ಪರೀಕ್ಷೆ ನಡೆಯುತ್ತಿದೆ. ರಾಜ್ಯದಲ್ಲಿ 8,48,200 ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆಯನ್ನು ಬರೆಯಲಿದ್ದು, ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಜೂನ್ 18 ರಂದು ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್

ವಲಸೆ ಕಾರ್ಮಿಕರ ಮಕ್ಕಳು ತಮ್ಮ-ತಮ್ಮ ಊರುಗಳಿಗೆ ತೆರಳಿರುವುದರಿಂದ ಆ ಪ್ರದೇಶದಲ್ಲಿಯೇ ಪರೀಕ್ಷೆಗೆ ಹಾಜರಾಗುವಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ 34 ಶೈಕ್ಷಣಿಕ ಜಿಲ್ಲೆಗಳಿದ್ದು, ಎಲ್ಲಾ ವಿದ್ಯಾರ್ಥಿಗಳು ಆತ್ಮಸ್ಥೈರ್ಯದಿಂದ ಪರೀಕ್ಷೆಯನ್ನು ಎದುರಿಸಬೇಕು. ಆ ನಿಟ್ಟಿನಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚು ಕಾಳಜಿ ವಹಿಸಲಾಗುತ್ತಿದೆ ಎಂದರು.

ಪರೀಕ್ಷೆ ಬರೆಯುವ ಸ್ಥಳಕ್ಕೆ ವಿದ್ಯಾರ್ಥಿಗಳು ತೆರಳಲು ಬಸ್ ವ್ಯವಸ್ಥೆ ಮಾಡಲಾಗಿದ್ದು, ತಮ್ಮ ಹಾಲ್ ಟಿಕೆಟ್​​​​ನ್ನು ತೋರಿಸಿದರೆ ಉಚಿತವಾಗಿ ಪರೀಕ್ಷಾ ಸ್ಥಳಕ್ಕೆ ಬಿಡುವಂತೆ ಮಾಡುವ ಮೂಲಕ ಸಾರಿಗೆ ತೊಂದರೆಯಾಗದಂತೆ ಜಾಗೃತೆ ವಹಿಸಲಾಗಿದೆ. ಖಾಸಗಿ ಶಾಲೆಯ ಬಸ್​​​ಗಳ ಸದುಪಯೋಗವನ್ನು ಪಡೆದುಕೊಳ್ಳಲಾಗುವುದು ಎಂದು ತಿಳಿಸಿದರು. ಖಾಸಗಿ ಶಾಲೆಗಳು ಮಾನವೀಯ ದೃಷ್ಟಿಯಿಂದ ಈ ಬಾರಿಯ ಶೈಕ್ಷಣಿಕ ವರ್ಷದ ಶಾಲಾ ಶುಲ್ಕವನ್ನು ಹೆಚ್ಚಳ ಮಾಡಬಾರದು ಎಂದು ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದರು.

ABOUT THE AUTHOR

...view details