ತುಮಕೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗುರುವಾರ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅಚ್ಚಮನಹಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಹೂಡಲಿರುವ ಹಿನ್ನಲೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿಕ್ಷಣ ಸಚಿವರ ಗ್ರಾಮ ವಾಸ್ತವ್ಯ: ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ರಾತ್ರಿ ವಾಸ್ತವ್ಯ ಹೂಡಲಿರುವ ಸಚಿವರು ಗ್ರಾಮದ ಸಮಸ್ಯೆ ಹಾಗೂ ಅಭಿವೃದ್ಧಿ ಕುರಿತು ಸ್ಥಳೀಯರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ಅಚ್ಚಮ್ಮನ ಹಳ್ಳಿ ಗ್ರಾಮದಲ್ಲಿ ಶಿಕ್ಷಣ ಸಚಿವರ ಗ್ರಾಮ ವಾಸ್ತವ್ಯದಿಂದಾಗಿ ಆ ಭಾಗದ ಜನರಲ್ಲಿ ಸಂತಸ ಮನೆ ಮಾಡಿದಂತಾಗಿದೆ. ಕಾರಣ ತಿರುಮಣೆ ಸುತ್ತಮುತ್ತಲಿನ ಪ್ರದೇಶ ಒಂದು ಕಾಲದಲ್ಲಿ ನಕ್ಸಲ್ ಪೀಡಿತ ಪ್ರದೇಶವಾಗಿತ್ತು. 2004ರಲ್ಲಿ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಿದ್ದ ಪೊಲೀಸರ ಮೇಲೆ ನಕ್ಸಲರು ದಾಳಿ ನಡೆಸಿ, 7 ಪೋಲಿಸರು 1 ಒಬ್ಬ ನಾಗರೀಕ ಸೇರಿದಂತೆ 8 ಜನ ಸಾವನ್ನಪ್ಪಿದ್ದರು. ಇಂತಹ ಗಡಿ ಪ್ರದೇಶಕ್ಕೆ ಹಲವು ಸಚಿವರು, ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೂಡ ಸೌರ ಘಟಕದ ವೀಕ್ಷಣೆಗೆ ಭೇಟಿ ನೀಡಿದ್ದರು.
ಶಿಕ್ಷಣ ಸಚಿವರ ಗ್ರಾಮವಾಸ್ತವ್ಯ ಹಿನ್ನಲೆ ಮಧುಗಿರಿ ಎಸಿ ಚಂದ್ರಶೇಖರಯ್ಯ ,ತಹಶೀಲ್ದಾರ್ ವರದರಾಜು ,ಇಒ ನರಸಿಂಹ ಮೂರ್ತಿ ,ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಗಂಗಯ್ಯ ಮುಂತಾದರು ಶಾಲೆಗೆ ಭೇಟಿ ನೀಡಿ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ.