ಕರ್ನಾಟಕ

karnataka

ETV Bharat / state

ತುಮಕೂರು ಲೋಕಸಭಾ ಕ್ಷೇತ್ರದ  ಮತ ಎಣಿಕೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲು ಸೂಚನೆ - tumkur

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನಿಷ್ಪಕ್ಷಪಾತವಾಗಿ ಮತ ಎಣಿಕೆ ನಡೆಯಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ಕ್ಷೇತ್ರ ಚುನಾವಣಾಧಿಕಾರಿ​ ಸೂಚಿಸಿದ್ದಾರೆ.

ಚುನಾವಣಾಧಿಕಾರಿ

By

Published : May 15, 2019, 5:02 PM IST

Updated : May 15, 2019, 7:14 PM IST

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಸುಗಮವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಹೆಚ್ಚುವರಿ ಪೊಲೀಸ್​ ಸಿಬ್ಬಂದಿಯನ್ನು ನಿಯೋಜಿಸುವಂತೆ ಕ್ಷೇತ್ರ ಚುನಾವಣಾಧಿಕಾರಿಗಳು ಎಸ್​ಪಿಗೆ ಸೂಚಿಸಿದ್ದಾರೆ.

ತುಮಕೂರು ಚುನಾವಣಾ ಕಚೇರಿ

ತುಮಕೂರು ವಿಶ್ವವಿದ್ಯಾಲಯದ ವಿಜ್ಞಾನ ಕಾಲೇಜು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಇದು ಅತ್ಯಂತ ಸೂಕ್ಷ್ಮ ಕ್ಷೇತ್ರವಾಗಿದೆ ಎಂದು ಜಿಲ್ಲಾ ಎಸ್ಪಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಕ್ಷೇತ್ರ ಚುನಾವಣಾಧಿಕಾರಿಗಳು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬರೆದಿರುವ ಪತ್ರ

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನಿಷ್ಪಕ್ಷಪಾತ ಮತ ಎಣಿಕೆ ನಡೆಸಲು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು ಮೇ 13ರಂದು ರಾಜ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಈ ಪತ್ರವನ್ನು ಕೂಡ ಜಿಲ್ಲಾಧಿಕಾರಿಗಳು ಉಲ್ಲೇಖಿಸಿದ್ದು, ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಕ್ರಮ ಕೈಗೊಂಡಿರುವ ಬಗ್ಗೆ ಬಸವರಾಜ್ ಅವರ ಗಮನಕ್ಕೆ ತಂದಿದ್ದಾರೆ.

Last Updated : May 15, 2019, 7:14 PM IST

For All Latest Updates

TAGGED:

tumkur

ABOUT THE AUTHOR

...view details