ಕರ್ನಾಟಕ

karnataka

ETV Bharat / state

ರಾಜೀನಾಮೆಗೂ ಮುನ್ನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ

ಉನ್ನತ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಪ್ರಕರಣದ ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇನೆ- ಕೆ.ಎಸ್.ಈಶ್ವರಪ್ಪ.

ಸಚಿವ ಕೆ. ಎಸ್​ ಈಶ್ವರಪ್ಪ
ಸಚಿವ ಕೆ. ಎಸ್​ ಈಶ್ವರಪ್ಪ

By

Published : Apr 15, 2022, 8:32 PM IST

ತುಮಕೂರು:ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ, ಡಾ.ಶಿವಕುಮಾರ ಸ್ವಾಮೀಜಿಯ ಗದ್ದುಗೆ ದರ್ಶನ ಪಡೆದರು. ನಂತರ ಮಾತನಾಡುತ್ತಾ, ಬಿಜೆಪಿ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಹಾಗೂ ಕಾರ್ಯಕರ್ತರಿಗೆ ಯಾವುದೇ ರೀತಿಯ ಇರುಸು ಮುರುಸು ಆಗಬಾರದು ಎಂಬ ಉದ್ದೇಶದಿಂದ ನಾನು ಇಂದು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದರು.


ಉನ್ನತ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಪ್ರಕರಣದ ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇನೆ. ಇದು ನನ್ನ ವಿರುದ್ಧ ನಡೆದ ವ್ಯವಸ್ಥಿತ ಷಡ್ಯಂತ್ರ. ಸಂತೋಷ್‌ ಪಾಟೀಲ್ ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನ ಮೂಡಿ ಬರುತ್ತಿದೆ. ಅಕಸ್ಮಾತ್ ಕೊಲೆಯಾಗಿದ್ದರೆ ಯಾರು ಕೊಲೆಗಾರರು? ಎಂಬುದು ಬೆಳಕಿಗೆ ಬರಬೇಕಿದೆ ಎಂದರು.

ಇದನ್ನೂ ಓದಿ:'ಸಂತೋಷ್ ಪಾಟೀಲ್ ಆತ್ಮಹತ್ಯೆ ಈಶ್ವರಪ್ಪರ ನಿರ್ಲಕ್ಷ್ಯದಿಂದ ನಡೆದಿದೆ'

For All Latest Updates

TAGGED:

ABOUT THE AUTHOR

...view details