ಕರ್ನಾಟಕ

karnataka

ETV Bharat / state

ಕ್ಷೇತ್ರದಲ್ಲಿ ಒಳ್ಳೆ ಕೆಲಸ ಮಾಡದೆ ಬೇರೆ ಕಡೆ ಹೋಗುತ್ತಿದ್ದಾರೆ: ಸಿದ್ದರಾಮಯ್ಯ ಬಗ್ಗೆ ಬಿಎಸ್​ವೈ ವ್ಯಂಗ್ಯ - ಕ್ಷೇತ್ರದ ಹುಡುಕಾಟ ಪ್ರಾರಂಭಿಸಿರುವ ಪ್ರತಿಪಕ್ಷದ ನಾಯಕ

ಕ್ಷೇತ್ರದ ಹುಡುಕಾಟ ಪ್ರಾರಂಭಿಸಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಗೆಲ್ಲುತ್ತಾರೆಯೋ, ಸೋಲುತ್ತಾರೋ ಎಂಬುದು ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ತಿಳಿಸಿದರು.

ex-cm-bs-yediyurappa-reaction-on-siddaramaiahs-constituency-searching
ಕ್ಷೇತ್ರದಲ್ಲಿ ಒಳ್ಳೆ ಕೆಲಸ ಮಾಡದೆ ಬೇರೆ ಕಡೆ ಹೋಗುತ್ತಿದ್ದಾರೆ: ಸಿದ್ದರಾಮಯ್ಯ ಬಗ್ಗೆ ಬಿಎಸ್​ವೈ ವ್ಯಂಗ್ಯ

By

Published : Nov 13, 2022, 6:26 PM IST

Updated : Nov 13, 2022, 7:14 PM IST

ತುಮಕೂರು:ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲಿ ಒಳ್ಳೆ ಕೆಲಸ ಮಾಡದೆ ಬೇರೆ ಕಡೆ ಹೋಗುತ್ತಿದ್ದಾರೆ. ಅದು ಕೋಲಾರ ಕ್ಷೇತ್ರವೋ, ಮತ್ತೊಂದು ಎಂಬುದು ಗೊತ್ತಿಲ್ಲ. ಅಂತೂ ಕ್ಷೇತ್ರದ ಹುಡುಕಾಟ ಪ್ರಾರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ಜಿಲ್ಲೆಯ ಯಡಿಯೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಹುಡುಕಾಟ ಪ್ರಾರಂಭಿಸಿರುವ ಸಿದ್ದರಾಮಯ್ಯ ಗೆಲ್ಲುತ್ತಾರೆಯೋ, ಸೋಲುತ್ತಾರೋ ಎಂಬುದು ಗೊತ್ತಿಲ್ಲ ಎಂದರು. ಇದೇ ವೇಳೆ ಕೆಂಪೇಗೌಡ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮಕ್ಕೆ ಆಮಂತ್ರಣ ಪತ್ರಿಕೆ ಪ್ರಿಂಟ್ ಹಾಕಿಸಿರಲಿಲ್ಲ. ಆದರೆ, ಸರ್ಕಾರದಿಂದ ವೈಯಕ್ತಿಕವಾಗಿ ಪತ್ರ ಬರೆಯಲಾಗಿತ್ತು ಎಂದರು.

ಕ್ಷೇತ್ರದಲ್ಲಿ ಒಳ್ಳೆ ಕೆಲಸ ಮಾಡದೆ ಬೇರೆ ಕಡೆ ಹೋಗುತ್ತಿದ್ದಾರೆ: ಸಿದ್ದರಾಮಯ್ಯ ಬಗ್ಗೆ ಬಿಎಸ್​ವೈ ವ್ಯಂಗ್ಯ

ಅಲ್ಲದೇ, ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡರು ಸೇರಿದಂತೆ ಅನೇಕ ಮುಖಂಡರಿಗೆ ಮುಖ್ಯಮಂತ್ರಿ ಪ್ರತ್ಯೇಕವಾಗಿ ವಿನಂತಿ ಮಾಡಿಕೊಂಡಿದ್ದರು. ದೇವೇಗೌಡರಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಆಹ್ವಾನಿಸಿದ್ದರು. ದೇವೇಗೌಡರು ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸವಿದೆ. ಕುಮಾರಸ್ವಾಮಿ ಅವರಿಗೂ ವಿನಂತಿ ಮಾಡಿಕೊಳ್ಳುತ್ತೇನೆ, ಅದನ್ನು ಗಂಭೀರವಾಗಿ ಪರಿಗಣಿಸಬಾರದು ಎಂದರು.

ವಿಧಾನಸೌಧದ ಎದುರು ಬಸವಣ್ಣನವರ ಪ್ರತಿಮೆಯನ್ನು ಸ್ಥಾಪನೆಗೆ ಸಂಪುಟದಲ್ಲಿ ನಿರ್ಧಾರವಾಗಿದೆ. ಮುಂದಿನ ತೀರ್ಮಾನವನ್ನು ಮುಖ್ಯಮಂತ್ರಿ ಮಾಡಲಿದ್ದಾರೆ. ಹಿಂದೂ ಎಂಬ ಬಗ್ಗೆ ಕೆಲವರು ಅನಗತ್ಯವಾಗಿ ವಿಷಯವನ್ನು ಎಳೆದು ತರುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು. ಇದೇ ಸಂದರ್ಭದಲ್ಲಿ ಮುದ್ದಹನುಮೇಗೌಡರಿಗೆ ಕುಣಿಗಲ್​ನಲ್ಲಿ ಟಿಕೆಟ್ ನೀಡುವ ಬಗ್ಗೆ ಭರವಸೆ ನೀಡಿಲ್ಲ. ಈ ಬಗ್ಗೆ ಪಕ್ಷ ತೀರ್ಮಾನಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ:ಸಂಸತ್ತಿನ ಮುಂದೆ ಟಿಪ್ಪು ಸುಲ್ತಾನ್ ಪ್ರತಿಮೆ ನಿಲ್ಲಿಸಬೇಕು: ವಾಟಾಳ್ ನಾಗರಾಜ್ ಒತ್ತಾಯ

Last Updated : Nov 13, 2022, 7:14 PM IST

ABOUT THE AUTHOR

...view details