ತುಮಕೂರು:ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಯಾಗದೆ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ರೈತರು ಆತ್ಮಹತ್ಯೆಯ ಹಾದಿ ತುಳಿಯುವಂತಾಗಿದೆ. ಇದೆಲ್ಲ ತಿಳಿದರೂ ಸಹ ಕೇಂದ್ರ ಸರ್ಕಾರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಎಂ.ಗೋವಿಂದರಾಜು ಆಕ್ರೋಶ ವ್ಯಕ್ತಪಡಿಸಿದರು.
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರೈತಪರ ಸಂಘಟನೆಗಳ ಪ್ರತಿಭಟನೆ.. - ತುಮಕೂರಿನಲ್ಲಿ ರೈತಪರ ಸಂಘಟನೆಗಳ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಇಂದು ರೈತಪರ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ವಿವಿಧ ರೈತಪರ ಸಂಘಟನೆಗಳು ಸೇರಿ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿದರು. ಇದೇ ವೇಳೆ ಮಾತನಾಡಿದ ಎಂ.ಗೋವಿಂದರಾಜು, ಜನವರಿ 8ರಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ರಾಷ್ಟ್ರಾದ್ಯಂತ ಇನ್ನೂರಕ್ಕೂ ಹೆಚ್ಚು ರೈತ ಸಂಘಟನೆಗಳು ಹಾಗೂ ಕಾರ್ಮಿಕ ಸಂಘಟನೆಗಳ ಸಹಯೋಗದಲ್ಲಿ ಗ್ರಾಮೀಣ ಕರ್ನಾಟಕ ಬಂದ್ ನಡೆಸಲಾಗುವುದು. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಯವರಿಗೆ ಸೂಚನೆ ನೀಡಲಾಗುತ್ತಿದೆ ಎಂದರು.
ಇಂದು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಯಾಗದೆ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಹಾಗಾಗಿ ರೈತರು ಆತ್ಮಹತ್ಯೆಯ ಹಾದಿ ತುಳಿಯುವಂತಾಗಿದೆ. ಇದೆಲ್ಲ ತಿಳಿದರೂ ಸಹ ಕೇಂದ್ರ ಸರ್ಕಾರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಡಾ. ಸ್ವಾಮಿನಾಥನ್ ವರದಿ ಜಾರಿಯಾಗಬೇಕು. ಇದರ ಜೊತೆಗೆ ರೈತರ 21 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮೀಣ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.