ತುಮಕೂರು :ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬೆಂಬಲಿಸಿ ಕರೆ ನೀಡಲಾಗಿದ್ದ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟಕ್ಕೆ ತುಮಕೂರು ಜಿಲ್ಲೆಯ ವಿವಿಧೆೆಡೆ ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ರೈತ ಹೋರಾಟಕ್ಕೆ ಬೆಂಬಲ.. ತುಮಕೂರಿನಲ್ಲಿ ವಿವಿಧ ಸಂಘಟನೆಗಳಿಂದ ರಸ್ತೆ ತಡೆ.. - ರೈತರ ಪ್ರತಿಭಟನೆ
ಕೇಂದ್ರದ ಮೋದಿ ಸರ್ಕಾರ ರೈತರ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದೇ ರೀತಿ ವರ್ತಿಸಿದ್ರೆ ಉಗ್ರ ಹೋರಾಟ ನಡೆಸಲಾಗುವುದು..
ರೈತ ಹೋರಾಟಕ್ಕೆ ಬೆಂಬಲ:ತುಮಕೂರಿನಲ್ಲಿ ವಿವಿಧ ಸಂಘಟನೆಗಳಿಂದ ರಸ್ತೆ ತಡೆ
ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ವಾಹನಗಳನ್ನು ತಡೆದು ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ತಿಪಟೂರು ತಾಲೂಕು ರಾಜ್ಯ ರೈತ ಸಂಘದ ಅಧ್ಯಕ್ಷ ಬಸ್ತಿಹಳ್ಳಿ ರಾಜಣ್ಣ ಅವರು, ಕೇಂದ್ರದ ಮೋದಿ ಸರ್ಕಾರ ರೈತರ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ.
ಇದೇ ರೀತಿ ವರ್ತಿಸಿದ್ರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಇತ್ತ ಕುಣಿಗಲ್ ತಾಲೂಕು ಹುಲಿಯೂರು ದುರ್ಗಾದಲ್ಲಿ ರೈತ ಸಂಘದ ವತಿಯಿಂದ ರಾಜ್ಯ ಹೆದ್ದಾರಿ ತಡೆ ನಡೆಸಲಾಯಿತು.