ಕರ್ನಾಟಕ

karnataka

ತುಮಕೂರು: ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ​ ತಂದೆ, ಮಗಳು ಸಾವು

By

Published : Jul 10, 2023, 11:39 AM IST

ಜಮೀನಿನಲ್ಲಿ ವಿದ್ಯುತ್​ ಶಾಕ್​ ಉಂಟಾಗಿ ತಂದೆ ಮತ್ತು ಮಗಳು ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ.

father-and-daughter-died-due-to-electric-shock-in-tumkur
ತುಮಕೂರು : ಜಮೀನಿನಲ್ಲಿ ವಿದ್ಯುತ್ ಶಾಕ್​ ತಗುಲಿ ತಂದೆ ಮಗಳು ಸಾವು

ತುಮಕೂರು : ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ​ ತಂದೆ ಹಾಗು ಮಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ಮೃತರನ್ನು ಬಸವನಹಳ್ಳಿಯ ರಾಮಕೃಷ್ಣ ರೆಡ್ಡಿ (65) ಹಾಗೂ ಮಗಳು ನಿರ್ಮಲ (45) ಎಂದು ಗುರುತಿಸಲಾಗಿದೆ. ರಾಮಕೃಷ್ಣ ರೆಡ್ಡಿ ಅವರು ಮಡಕಶಿರಾ ತಾಲೂಕಿನ ಎಲ್ಲೊಟಿಯಲ್ಲಿರುವ ತಮ್ಮ ಹೊಲದಲ್ಲಿ ನೀರು ಹಾಯಿಸಲು ತೆರಳಿದ್ದರು. ಕೊಳವೆ ಬಾವಿಯ ಬಳಿ ವಿದ್ಯುತ್ ಶಾಕ್​ ತಗುಲಿ ಅವರು ಮೃತಪಟ್ಟಿದ್ದಾರೆ. ತಂದೆ ಬರುವುದು ತಡವಾದ್ದರಿಂದ ಹೊಲಕ್ಕೆ ಹುಡುಕಿಕೊಂಡು ಬಂದ ಮಗಳೂ ಕೂಡ ತಂದೆಯನ್ನು ಮುಟ್ಟಿದ್ದಾರೆ. ಇದರಿಂದ ಅವರೂ ಕೂಡ ಸ್ಥಳದಲ್ಲೇ ವಿದ್ಯುತ್​ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details