ತುಮಕೂರು: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಅಪಾರ ನಷ್ಟ ಸಂಭವಿಸಿರುವ ಘಟನೆ ತಿಪಟೂರು ತಾಲೂಕು ಸೂಗೂರು ಗ್ರಾಮದಲ್ಲಿ ನಡೆದಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ, ಅಪಾರ ನಷ್ಟ - ಆಕಸ್ಮಿಕ ಬೆಂಕಿ
ಸೂಗೂರು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಪೀಠೋಪಕರಣ, ಕಂಪ್ಯೂಟರ್ಗಳು ಸುಟ್ಟು ಭಸ್ಮವಾಗಿದೆ.
ತುಮಕೂರು: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ...ಅಪಾರ ನಷ್ಟ!
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿದ್ದ ಪೀಠೋಪಕರಣ, ಕಂಪ್ಯೂಟರ್ಗಳು ಸುಟ್ಟು ಹೋಗಿವೆ. ಅಲ್ಲದೇ, ಅಪಾರ ಪ್ರಮಾಣದ ಔಷಧಿಗಳು ಕೂಡಾ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿರಬಹುದೆಂದು ಅಂದಾಜಿಸಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಗ್ರಾಮಸ್ಥರು ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಹಾನಿಯಾಗುವುದನ್ನು ತಪ್ಪಿಸಿದ್ದಾರೆ. ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.