ತುಮಕೂರು: ದನದ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ಮೂರು ಜಾನುವಾರುಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಬಂಡಿಹಳ್ಳಿಯಲ್ಲಿ ನಡೆದಿದೆ.
ದನದ ಕೊಟ್ಟಿಗೆಗೆ ಬೆಂಕಿ: ಮೂರು ಜಾನುವಾರುಗಳು ಸಜೀವ ದಹನ! - Tumkur cattle burned to ashes
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಂಡಿಹಳ್ಳಿಯಲ್ಲಿ ದನದ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ಮೂರು ಜಾನುವಾರುಗಳು ಸುಟ್ಟು ಕರಕಲಾಗಿವೆ. ಅವನ್ನು ರಕ್ಷಿಸಲು ಮುಂದಾದ ವ್ಯಕ್ತಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ದನದ ಕೊಟ್ಟಿಗೆಗೆ ಬೆಂಕಿ: ಮೂರು ಜಾನುವಾರುಗಳು ಸುಟ್ಟು ಭಸ್ಮ.....
ಬೆಂಕಿ ನಂದಿಸಲು ಹೋದ ಭದ್ರಯ್ಯ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ.