ತುಮಕೂರು:ಪ್ರಥಮ ಪಿಯುಸಿ ಆಂಗ್ಲಭಾಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಇಂದು ನಡೆಯಬೇಕಿದ್ದ ಆಂಗ್ಲ ಭಾಷೆ ಪರೀಕ್ಷೆಯನ್ನು ಮುಂದೂಡಲಾಗಿದೆ. ಜಿಲ್ಲೆಯಲ್ಲಿ ನಿನ್ನೆಯಿಂದ ಆರಂಭವಾಗಿದ್ದ ಪ್ರಥಮ ಪಿಯುಸಿ ಪರೀಕ್ಷೆಗಳು, ಇಂದು ನಡೆಯಬೇಕಿದ್ದ ಆಂಗ್ಲಭಾಷೆ ಪರೀಕ್ಷೆಯನ್ನು ಮಾರ್ಚ್ 6ಕ್ಕೆ ಮುಂದೂಡಲಾಗಿದೆ.
ಪ್ರಥಮ ಪಿಯುಸಿ ಆಂಗ್ಲಭಾಷಾ ಪ್ರಶ್ನೆ ಪತ್ರಿಕೆ ಸೋರಿಕೆ; ಮಾರ್ಚ್ 6ಕ್ಕೆ ಎಕ್ಸಾಮ್ ಮುಂದೂಡಿಕೆ - ಈಟಿವಿ ಭಾರತ ಕನ್ನಡ
ಪ್ರಥಮ ಪಿಯುಸಿ ಆಂಗ್ಲಭಾಷಾ ಪ್ರಶ್ನೆ ಪತ್ರಿಕೆ ಸೋರಿಕೆ- ಮಾರ್ಚ್ 6ಕ್ಕೆ ಎಕ್ಸಾಮ್ ಮುಂದೂಡಿಕೆ- ಸೈಬರ್ ಠಾಣೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ದೂರು
ಪ್ರಶ್ನೆ ಪತ್ರಿಕೆ ಸೋರಿಕೆ
ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ವಾಟ್ಸಾಪ್ಗಳಲ್ಲಿ ಹರಿದಾಡುತಿತ್ತು ಎಂಬ ವದಂತಿ ಹಿನ್ನೆಲೆ, ತನಿಖೆಗೆ ಹಿರಿಯ ಪ್ರಾಂಶುಪಾಲರ ನೇತೃತ್ವದಲ್ಲಿ ತ್ರಿ ಸದಸ್ಯರ ಕಮಿಟಿ ರಚನೆ ಮಾಡಲಾಗಿತ್ತು. ಇದೀಗ ಪರೀಕ್ಷೆಯನ್ನು ಮಾರ್ಚ್ 6ಕ್ಕೆ ಮುಂದೂಡಿ ಆದೇಶವನ್ನು ಹೊರಡಿಸಲಾಗಿದೆ. ಸೈಬರ್ ಠಾಣೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ದೂರು ನೀಡಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಾಧರ್ ತಿಳಿಸಿದ್ದಾರೆ.