ತುಮಕೂರು:ಕೊರೊನಾ ರೋಗಾಣು ಹರಡುವುದನ್ನು ತಡೆಯಲು ಜಿಲ್ಲೆ ಸಂಪೂರ್ಣ ಸ್ಥಬ್ಧವಾಗಿದೆ. ಈ ವೇಳೆ ಬೆಂಗಳೂರು, ಶಿವಮೊಗ್ಗ ಹೆದ್ದಾರಿಯಲ್ಲಿ ಹಸಿವಿನಿಂದ ನರಳುವ ನಿರ್ಗತಿಕರಿಗೆ, ಕೂಲಿ ಕಾರ್ಮಿಕರಿಗೆ ಸಿದ್ಧಗಂಗಾ ಮಠದ ವತಿಯಿಂದ ಆಹಾರ ವ್ಯವಸ್ಥೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಹಸಿವಿನಿಂದ ನರಳುತ್ತಿರುವವರಿಗೆ ಸಿದ್ಧಗಂಗಾ ಮಠದಿಂದ ಆಹಾರ ವ್ಯವಸ್ಥೆ: ಜಿಲ್ಲಾಧಿಕಾರಿ - rakesh kumar
ಕೊರೊನಾ ವೈರಸ್ ಹಾವಳಿಯಿಂದಾಗಿ ತುಮಕೂರು ಸಂಪೂರ್ಣ ಲಾಕ್ಡೌನ್ ಆಗಿದೆ. ಈ ವೇಳೆ ಬೆಂಗಳೂರು, ಶಿವಮೊಗ್ಗ ಹೆದ್ದಾರಿಯಲ್ಲಿ ಹಸಿವಿನಿಂದ ನರಳುವ ನಿರ್ಗತಿಕರಿಗೆ, ಕೂಲಿ ಕಾರ್ಮಿಕರಿಗೆ ಸಿದ್ಧಗಂಗಾ ಮಠದ ವತಿಯಿಂದ ಆಹಾರ ವ್ಯವಸ್ಥೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸಿದ್ಧಗಂಗಾ ಮಠ
ಈ ಕುರಿತಂತೆ ಈಗಾಗಲೇ ಸಿದ್ದಗಂಗಾ ಮಠದ ಸ್ವಾಮೀಜಿ ಜೊತೆ ಮಾತುಕತೆ ನಡೆಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಲಸೆ ಕಾರ್ಮಿಕರಿದ್ದು ಅವರಿಗೆ ಊಟದ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದೆವು. ಇದಕ್ಕೆ ಶ್ರೀಗಳು ಅನುಮತಿಸಿದ್ದು ಆಹಾರ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.