ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣಾ ಅಧಿನಿಯಮಗಳಡಿ ಸೂಕ್ತ ಪುನರ್ವಸತಿ ಕಲ್ಪಿಸದೆ ಒಕ್ಕಲೆಬ್ಬಿಸದಿರಲು ಒತ್ತಾಯಿಸಿ ಹಾಗೂ ಬೀದಿಬದಿ ಮಾರಾಟಗಾರರಿಗೆ ಶಾಶ್ವತ ನೆಲೆಯಾಗಿ ವೆಂಡಿಂಗ್ ಝೋನ್ಗಳ ನಿರ್ಮಾಣಕ್ಕೆ ಒತ್ತಾಯಿಸಿ ತುಮಕೂರು ಜಿಲ್ಲಾ ಫುಟ್‌ಪಾತ್ ವ್ಯಾಪಾರಿಗಳ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ವೆಂಡಿಂಗ್ ಝೋನ್ಗಳ ನಿರ್ಮಾಣಕ್ಕೆ ಒತ್ತಾಯಿಸಿ ಫುಟ್‌ಪಾತ್ ವ್ಯಾಪಾರಿಗಳ ಸಂಘದಿಂದ ಪ್ರತಿಭಟನೆ - ಫುಟ್‌ಪಾತ್ ವ್ಯಾಪಾರಿಗಳ ಸಂಘ
ಬೀದಿಬದಿ ಮಾರಾಟಗಾರರಿಗೆ ಶಾಶ್ವತ ನೆಲೆಯಾಗಿ ವೆಂಡಿಂಗ್ ಝೋನ್ಗಳ ನಿರ್ಮಾಣಕ್ಕೆ ಒತ್ತಾಯಿಸಿ ತುಮಕೂರು ಜಿಲ್ಲಾ ಫುಟ್‌ಪಾತ್ ವ್ಯಾಪಾರಿಗಳ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಿ, ಗುರುತಿನ ಚೀಟಿ ಮತ್ತು ಪ್ರಮಾಣಪತ್ರವನ್ನು ನೀಡಬೇಕು. ಹಲವು ವರ್ಷಗಳಿಂದ ನವೀಕರಿಸಿದ ಗುರುತಿನ ಚೀಟಿಗಳನ್ನು ತಕ್ಷಣ ನವೀಕರಿಸಬೇಕು. ಗುರುತಿನ ಚೀಟಿ ಹೊಂದಿದ್ದು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳನ್ನು ನಿಯಮಾನುಸಾರ ಸೂಕ್ತ ಪುನರ್ವಸತಿ ಕಲ್ಪಿಸದೆ ಒಕ್ಕಲೆಬ್ಬಿಸಬಾರದು. ಈ ಸಂದರ್ಭದಲ್ಲಿ ಪೊಲೀಸರ ಮಧ್ಯಪ್ರವೇಶ ತಡೆದು, ಶಾಸನಬದ್ಧವಾಗಿ ಸಂಬಂಧಿಸಿದ ಸಮಿತಿಯಲ್ಲಿ ಚರ್ಚಿಸಿ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿಬದಿ ವ್ಯಾಪಾರಿಗಳ ಪ್ರಶ್ನೆಯನ್ನು ಕಾನೂನಿನನ್ವಯ ಆಯ್ಕೆಯಾಗಿರುವ ಬೀದಿಬದಿ ವ್ಯಾಪಾರಿಗಳ ಪಟ್ಟಣ ವ್ಯಾಪಾರಿಗಳ ಸಮಿತಿಯಲ್ಲಿ ಕಡ್ಡಾಯವಾಗಿ ಚರ್ಚಿಸಿ ಕ್ರಮಕ್ಕೆ ಮುಂದಾಗಬೇಕು. ಪಟ್ಟಣ ವ್ಯಾಪಾರಿಗಳ ಸಮಿತಿ ಸಭೆಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು. ಬೀದಿಬದಿ ವ್ಯಾಪಾರಿಗಳ ವಲಯಗಳ ನಿರ್ಮಾಣಕ್ಕೆ ಸ್ಮಾರ್ಟ್ ಸಿಟಿ ಇಂದ ಕನಿಷ್ಠ 15 ಕೋಟಿ ರೂ. ಮೀಸಲಿಡಬೇಕು ಎಂಬ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತುಮಕೂರು ಜಿಲ್ಲಾ ಫುಟ್ ಪಾತ್ ವ್ಯಾಪಾರಿಗಳ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.