ತುಮಕೂರು :ಶ್ರೀಗಂಧ ಮರ ಕಡಿಯುತ್ತಿದ್ದ ಇಬ್ಬರು ಮರಗಳ್ಳರನ್ನು ಹಿಡಿಯಲು ಹೋದ ವೇಳೆ ಅರಣ್ಯಾಧಿಕಾರಿಗಳ ಮೇಲೆ ಏಕಾಏಕಿ ದಾಳಿ ನಡೆದಿದೆ. ಈ ವೇಳೆ ಅಧಿಕಾರಿಗಳು ಪ್ರತಿದಾಳಿ ನಡೆಸಿ ಇಬ್ಬರನ್ನು ಹತ್ಯೆ ಮಾಡಿದ್ದಾರೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೆಂಕೆರೆ ಅರಣ್ಯದಲ್ಲಿ ಇಬ್ಬರು ಶ್ರೀಗಂಧದ ಮರಗಳನ್ನು ಕಟಾವು ಮಾಡುತ್ತಿದ್ದರು. ಈ ವೇಳೆ ಗಸ್ತಿನಲ್ಲಿದ್ದ ಅಧಿಕಾರಿಗಳು ಅವರನ್ನು ಬಂಧಿಸಲು ಮುಂದಾಗಿದ್ದರು.