ಕರ್ನಾಟಕ

karnataka

ETV Bharat / state

ತುಮಕೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ - HD Kumaraswamys escort vehicle met with an accident

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಮೂವರು ಸಿಬ್ಬಂದಿಗೆ ಸಣ್ಣಪುಟ್ಟಗಾಯಗಳಾಗಿವೆ.

former-chief-minister-hd-kumaraswamys-escort-vehicle-met-with-an-accident-in-tumkur
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ

By

Published : Aug 2, 2022, 11:44 AM IST

ತುಮಕೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ತಿಪ್ಪೂರು ಗೇಟ್ ಬಳಿ ನಡೆದಿದೆ. ತಡ ರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕುಮಾರಸ್ವಾಮಿ ಅವರ ಎಸ್ಕಾರ್ಟ್ ವಾಹನದಲ್ಲಿದ್ದ ಐವರಲ್ಲಿ ಮೂವರಿಗೆ ಗಾಯವಾಗಿದೆ.

ಪೊಲೀಸ್ ಸಿಬ್ಬಂದಿಗಳಾದ ಮಹೇಶ್,ಮಂಜುನಾಥ್, ಆನಂದ್ ಹರೀಶ್ ಗೆ ಸಣ್ಣಪುಟ್ಟಗಾಯಗಳಾಗಿದ್ದು, ಗಾಯಾಳುಗಳನ್ನು ಆದಿಚುಂಚನಗಿರಿ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಮೃತ್ತೂರು ಪೊಲೀಸರು ಭೇಟಿ‌ ಪರಿಶೀಲನೆ ನಡೆಸಿದ್ದು, ಅಮೃತ್ತೂರು‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ :ಕೋಮು‌ ಪ್ರಚೋದನೆ ಆರೋಪ: ದೆಹಲಿ ಮೂಲದ ಒಬ್ಬ ಸೇರಿ ಇಬ್ಬರ ಬಂಧನ

ABOUT THE AUTHOR

...view details