ತುಮಕೂರು:ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು? ಎಂಬುದನ್ನು ಪ್ರಸ್ತಾಪಿಸುವುದು ಅಪ್ರಸ್ತುತವಾಗಿದೆ. 2023ರಲ್ಲಿ ನಡೆಯುವ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿ ಬರುವಂತಹವರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ಬಾರಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ 125 ಶಾಸಕರನ್ನು ಗೆಲ್ಲಿಸಿಕೊಟ್ಟರೆ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದರು.