ತುಮಕೂರು:ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿ ಮಾಜಿ ಶಾಸಕ ಸೊಗಡು ಶಿವಣ್ಣ ಇಂದು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಗಳ ಗುಣಮಟ್ಟವನ್ನು ಪರೀಕ್ಷಿಸಿದರು.
ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ಆಕ್ರೋಶ - ಕಾಮಗಾರಿ ವೀಕ್ಷಿಸಿದ ಮಾಜಿ ಸಚಿವ ಸೊಗಡು ಶಿವಣ್ಣ ಲೆಟೆಸ್ಟ್ ನ್ಯೂಸ್
ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿ ಇಂದು ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಶಾಸಕರು ಪೇಸರ್ಸ್ ಕೆಡವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Former MLA Sogadu Shivann
ಇಂದು ನಗರದಕ್ಕೆ ಭೇಟಿ ನೀಡಿದ ಶಾಸಕರು ಅಶೋಕ ರಸ್ತೆಯ ಚರ್ಚ್ ವೃತ್ತದಲ್ಲಿ ನಡೆಯುತ್ತಿರುವ ಪೈಪ್ ಲೈನ್ ಕಾಮಗಾರಿ ಬಳಿ ತಮ್ಮ ಬೆಂಬಲಿಗರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಡಕ್ಟಿಂಗ್ ಲೈನ್ ಸ್ಪೇಸರ್ಸ್ಗಳಿಗೆ ಕ್ಯೂರಿಂಗ್ ಮಾಡದೇ ಪೈಪ್ ಅಳವಡಿಸಲಾಗುತ್ತಿದೆ ಎಂದು ಆರೋಪಿಸಿ ಪೇಸರ್ಸ್ ಕೆಡವಿ ನಿಜಬಣ್ಣ ಬಯಲು ಮಾಡಿದ್ದಾರೆ.
ಬಳಿಕ ಸ್ಪೇಸರ್ಸ್ ಕೆಡವಿ ಸ್ಥಳದಲ್ಲಿದ್ದ ಇಂಜಿನಿಯರ್ಗಳನ್ನ ತರಾಟೆ ತೆಗದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.