ತುಮಕೂರು :ಇತ್ತೀಚಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಶಾಸಕ ಸುರೇಶ್ ಗೌಡ ಅವರು ಜಿಲ್ಲಾ ಉಸ್ತುವಾರಿ ಸಚಿವ ಜೆ ಮಾಧುಸ್ವಾಮಿ ವಿರುದ್ಧ ಗುಡುಗಿದ್ದಾರೆ.
ತಾಲೂಕಿನ ಗೂಳೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ತಮ್ಮ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತುಮಕೂರು ಗ್ರಾಮಾಂತರ ಕ್ಷೇತ್ರದ ಯಾವ ಕೆರೆಗೂ ನೀರು ಬಂದಿಲ್ಲ. ಸಚಿವ ಮಾಧುಸ್ವಾಮಿ ಇತ್ತ ಗಮನ ಹರಿಸಿ ನೀರು ಬಿಡಬೇಕು. ಗ್ರಾಮಾಂತರ ಪ್ರದೇಶಕ್ಕೆ ಹೇಮಾವತಿ ನೀರಿನ ವಿಚಾರದಲ್ಲಿ ತಾರತಮ್ಯ ಆಗಿದೆ ಎಂದರು.